ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದು, “ರಾಜ್ಯ ಸಚಿವ ಸಂಪುಟದಲ್ಲಿ ಡಿ.10ರ ನಂತರ ಭಾರೀ ಬದಲಾವಣೆಯಾಗಲಿದೆ” ಎಂದಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಜೊತೆ ಕೆಲ ಸಚಿವರು ಸುತ್ತಾಡುತ್ತಲೇ ಇದ್ದಾರೆ. ಅವರು ಶಾಸಕರಿಗೆ ಸಮಯ ನೀಡುವುದಿಲ್ಲ. ಡಿ.10ರ ನಂತರ ಅಂತವರನ್ನು ಸಂಪುಟದಿಂದಲೇ ಕೈ ಬಿಡುವ ಚಿಂತನೆಗಳು ನಡೆದಿವೆ. ಎಲ್ಲಾ ಸಚಿವರ ಕೈಬಿಡುವ ಬಗ್ಗೆ ಚಿಂತನೆ ನಡೆದಿಲ್ಲ. ಕೆಲಸ ಮಾಡದೇ ಇರುವ ಸಚಿವರನ್ನು ಸಂಪುಟದಿಂದ ಕೈಬಿಡುವ ಚಿಂತನೆ ನಡೆದಿದೆ. ಸಿಎಂ ಬದಲಾವಣೆ ಆಗುವುದಿಲ್ಲ” ಎಂದು ಹೇಳಿದ್ದಾರೆ.
“ಕೆಲವು ಸಚಿವರು ಸಿಎಂ ಅವರೊಂದಿಗೆ ಓಡಾಡಿಕೊಂಡು ಇರುತ್ತಾರೆ. ಸಚಿವರು ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡಲಿಲ್ಲ ಎಂದಾದಲ್ಲಿ ಮುಂದಿನ ದಿನಗಳಲ್ಲಿ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಯತ್ನಾಳ್ ಅವರಿಗೆ ಗೌಪ್ಯ ಮಾಹಿತಿ ಬಂದಿರಬಹುದು. ರಾಜ್ಯಕ್ಕೆ ತೆರಳಿದ ಬಳಿಕ ಅವರ ಜೊತೆ ನಾನು ಮಾತುಕತೆ ನಡೆಸುತ್ತೇನೆ” ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…