ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಹುನಿರೀಕ್ಷಿತ “ಆತ್ಮ ಚರಿತ್ರೆ’ ಕುರಿತ ಪುಸ್ತಕ ಡಿ.13ಕ್ಕೆ ನವದೆಹಲಿಯಲ್ಲಿ ಬಿಡುಗಡೆಯಾಗಲಿದೆ.
ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಬರೆದಿರುವ ಈ ಪುಸ್ತಕದಲ್ಲಿ ದೇವೇಗೌಡರ ವೈಯಕ್ತಿಕ ಹಾಗೂ ರಾಜಕೀಯ ಜೀವನದ ಏಳುಬೀಳುಗಳು, ರಾಜಕೀಯ ಸಂಕೀರ್ಣ ಕಾಲದಲ್ಲಿ ಅವರು ಕೈಗೊಂಡ ನಿರ್ಣಯಗಳು, ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಅವರು ಆಯಾ ಸಂದರ್ಭಕ್ಕೆ ತಾಳಿದ ನಿಲುವು, ಮುಖ್ಯಮಂತ್ರಿಯಿಂದ ಪ್ರಧಾನಿ ಹುದ್ದೆಗೆ ಏರಿದ ರಾಜಕೀಯ ಹಾದಿ ಕುರಿತ ವಿಚಾರಗಳು ಇವೆ.
ದೆಹಲಿಯಲ್ಲಿ ನಡೆಯುವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಪ್ರೀಂಕೋರ್ಟ್‌ನ ಖ್ಯಾತ ಹಿರಿಯ ನ್ಯಾಯವಾದಿ ಫಾಲಿ ಎಸ್. ನಾರಿಮನ್ ಒಪ್ಪಿಕೊಂಡಿದ್ದು, ರಾಜಕೀಯ ಹಾಗೂ ಇತರ ಕ್ಷೇತ್ರಗಳ ಗಣ್ಯಮಾನ್ಯರು ಆತ್ಮ ಚರಿತ್ರೆಯ ಬಿಡುಗಡೆಗೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…