Featured

ಡಿ.13ರಂದು ಉಡುಪಿ ಶ್ರೀಕೃಷ್ಣ ಮಠ ವಿಶ್ವಶಾಂತಿ ಸಮಾವೇಶಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ – viswhanews24

ಡಿ.13ರಂದು ಉಡುಪಿ ಶ್ರೀಕೃಷ್ಣ ಮಠ ವಿಶ್ವಶಾಂತಿ ಸಮಾವೇಶಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್

ಉಡುಪಿ: ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ವಿಶ್ವ ಗೀತಾ ಪರ್ಯಾಯ ಸಂದರ್ಭದಲ್ಲಿ ಡಿ.13ರಂದು ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಅಮೆರಿಕಾದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪಧಾನ ಕಾರ್ಯದರ್ಶಿ ಡಾ.ವಿಲಿಯಂ ಎಫ್. ವಿಂಡ್ಡೆ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ, ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಭಾಗವಹಿಸಲಿದ್ದಾರೆ. ಚಿಂತಕ ರೋಹಿತ್ ಚಕ್ರತೀರ್ಥ ಹಾಗೂ ಡಾ.ಸುಧೀರ್ ರಾಜ್ ಕೆ. ವಿಚಾರ ಮಂಡಿಸುವರು.

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಲಿದ್ದು, ಕಿರಿಯ ಶ್ರೀ ಸುಶೀಂದ್ರತೀರ್ಥ ಶ್ರೀಪಾದರು ಭಾಗವಹಿಸುವರು.
ಅಪರಾಹ್ನ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ವಾಲ್ಮೀ ಡಾ.ಕೆ.ಪಿ.ಪುತ್ತೂರಾಯ ಆಗಮಿಸುವರು.

ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ `ಸರ್ವಮೂಲಭಾವಪರಿಚಯ’ ಹಾಗೂ ಡಾ.ಚೂಡಾಮಣಿ ನಂದಗೋಪಾಲ್ ಮತ್ತು ಡಾ.ಅರುಣಾ ಕೆ.ಆರ್. ವಿರಚಿತ `ಉಡುಪಿ ಶ್ರೀಕೃಷ್ಣ ಮಠ’ ದೇವಾಲಯದ ಸಂಸ್ಕೃತಿ ಸಿರಿ ಅನಾವರಣಗೊಳ್ಳಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ವಿದ್ವಾನ್ ಪುಸನ್ನ ಆಚಾರ್ಯ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago