Featured

ಡಿ. 14 ರಿಂದ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲು ಸಂಚಾರ ರದ್ದು – vishwanews24

ಡಿ. 14 ರಿಂದ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲು ಸಂಚಾರ ರದ್ದು

ಮಂಗಳೂರು: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲು ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಮ್ಯಾನೇಜರ್ (ಕಾರ್ಯಾಚರಣೆ) ಅವರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ನೈಋತ್ಯ ರೈಲ್ವೆಯು ಹಾಸನದ ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ನಲ್ಲಿ ವಿವಿಧ ಕಾಮಗಾರಿಗಳ ಹಿನ್ನಲೆ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ವಿವಿಧ ದಿನಾಂಕಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಿದೆ ಎಂದು ತಿಳಿಸಿದೆ.

ರೈಲು ಸಂಖ್ಯೆ 16511 ಬೆಂಗಳೂರು- ಮಂಗಳೂರು- ಕಣ್ಣೂರು ಮತ್ತು ರೈಲು ಸಂಖ್ಯೆ 16595 ಬೆಂಗಳೂರು- ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಡಿಸೆಂಬರ್ 16 ರಿಂದ ಡಿಸೆಂಬರ್ 20 ತನಕ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16512 ಕಣ್ಣೂರು- ಮಂಗಳೂರು- ಬೆಂಗಳೂರು ಮತ್ತು ರೈಲು ಸಂಖ್ಯೆ 16596 ಕಾರವಾರ – ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 17 ರಿಂದ ಡಿಸೆಂಬರ್ 21 ತನಕ ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 14, 17, 19 ಮತ್ತು 21 ರಂದು ರದ್ದುಗೊಳಿಸಲಾಗಿದೆ.

ಮಂಗಳೂರು ಜಂಕ್ಷನ್- ಯಶವಂತಪುರ ಗೋಮಟೇಶ್ವರ ಎಕ್ಸ್‌ಪ್ರೆಸ್ 16576ನ್ನು ಡಿಸೆಂಬರ್ 15, 18, 20 ಮತ್ತು 22 ರಂದು ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ನಂಬರ್ 16515 ಪ್ರಯಾಣವನ್ನು ಡಿಸೆಂಬರ್ 13, 15,18,20 ಮತ್ತು 22 ರಂದು ರದ್ದುಪಡಿಸಲಾಗಿದೆ.

ವಾರದಲ್ಲಿ ಮೂರು ದಿನ ಸಂಚರಿಸುವ ಕಾರವಾರ- ಯಶವಂತಪುರ ನಂಬರ್ 16516 ನಂಬರ್ ರೈಲು ಸೇವೆಯನ್ನು ಡಿಸೆಂಬರ್ 14, 16, 19, 21 ಮತ್ತು 23 ರಂದು ರದ್ದುಗೊಳಿಸಲಾಗಿದೆ. ಡಿಸೆಂಬರ್ 16 ಮತ್ತು 17 ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲ್(16539/ 16540) ಓಡಾಟವನ್ನು ಕ್ರಮವಾಗಿ ರದ್ದುಪಡಿಸಲಾಗಿದೆ. ಲಭ್ಯ ರೈಲು ಮಾರ್ಗ ಈ ಅವಧಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು- ಮುರ್ಡೇಶ್ವರ-ಬೆಂಗಳೂರು (ರೈಲು ಸಂಖ್ಯೆ. 16585/ 586 ) ರಾಜಧಾನಿಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಏಕೈಕ ರೈಲು ಆಗಿರುತ್ತದೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

28 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 hours ago