ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಡಿ.28ರವರೆಗೆ ಸಂಚರಿಸಲಿವೆ.
ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದ್ದು, ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಡಿ.19, ಡಿ.20 ಹಾಗೂ ಡಿ.24ರಂದು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಮಂಗಳೂರು, ಉಡುಪಿ, ಮಡಿಕೇರಿ, ಹಾಸನ, ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಕಲಬುರಗಿ, ರಾಯಚೂರು, ಬೀದರ್ ಸೇರಿದಂತೆ ಹಲವು ನಗರಗಳಿಗೆ ಬಸ್ ಸಂಚಾರ ಇರಲಿದೆ. ಡಿ.26 ಹಾಗೂ 28ರಂದು ಬೇರೆ ಬೇರೆ ಊರುಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ಮಾಡಲಾಗಿದೆ.
ಹಬ್ಬದ ಅವಧಿಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ದರಗಳೇ ಅನ್ವಯವಾಗಲಿದ್ದು, ಯಾವುದೇ ವಿಶೇಷ ಹಬ್ಬದ ದರ ಇಲ್ಲ. ಇನ್ನೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸುವ ವ್ಯವಸ್ಥೆ ಮಾಡಲಾಗುವುದು ನಿಗಮ ಮಾಹಿತಿ ನೀಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…