ತಿರುವನಂತಪುರ,: ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಡಿ.20ರ ರವಿವಾರದಿಂದ ತೀರ್ಥಯಾತ್ರೆಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದವರೆಗೆ ಹೆಚ್ಚಿಸಬೇಕು ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್, ಶಬರಿಮಲೆಯಲ್ಲಿ ವಿಧಿಸಲಾಗಿರುವ ನಿರ್ಬಂಧಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಗಣಿಸಿದ್ದು, ನಿಲಕ್ಕಲ್ ತಲುಪುವ ಮೊದಲು 48 ಗಂಟೆಗಳ ಒಳಗಾಗಿ ಆರ್‌ಟಿಪಿಸಿಆರ್ ಪರೀಕ್ಷೆಯ ಆಧಾರದ ಮೇಲೆ ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಡಿ.30ರಿಂದ ಕಡ್ಡಾಯ ಮಾಡಲಾಗುವುದು ಎಂದು ಆದೇಶದಲ್ಲಿ ಹೇಳಿತ್ತು.
ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಬರುವ ದೈನಂದಿನ ತೀರ್ಥಯಾತ್ರಿಕರ ಸಂಖ್ಯೆಯನ್ನು ಪ್ರಾರಂಭದ ವಾರದ ದಿನಗಳಲ್ಲಿ 1000 ಹಾಗೂ ವಾರಾಂತ್ಯದ ವೇಳೆ 2000 ಎಂದು ನಿಗದಿ ಮಾಡಲಾಗಿತ್ತು. ನಂತರ ದೇವಸ್ಥಾನದಿಂದ ಬರುವ ಆದಾಯ ಕಡಿಮೆಯಾದ ಕಾರಣ ದೇವಸ್ಥಾನವನ್ನು ನಿರ್ವಹಣೆ ಮಾಡುವ ತಿರುವಾಂಕೂರು ದೇವಸ್ವಂ ಮಂಡಳಿಯ ಮನವಿಯ ಮೇರೆಗೆ ಭಕ್ತರ ಸಂಖ್ಯೆಯಬ್ಬಯ 2000 ಹಾಗೂ 3000ಕ್ಕೆ ಅಧಿಕ ಮಾಡಲಾಯಿತು.
ನ.16ರಿಂದ ತೀರ್ಥಯಾತ್ರೆ ಆರಂಭವಾದ ಬಳಿಕ ಇಲ್ಲಿಯವರೆಗೆ 300ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟುಹೊಳಿಸಲಾಗಿತ್ತು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…