ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಡಿ.21 ರ ಶನಿವಾರ ನಗರಕ್ಕೆ ಆಗಮಿಸಲಿದ್ದಾರೆ.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿರುವ ಅವರು ಮಧ್ಯಾಹ್ನ 2:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.

ಹಾಗೆಯೇ ಸಂಜೆ 5 ಗಂಟೆಗೆ ಮೂಡುಬಿದ್ರೆಯ ಕಡಲಕೆರೆ ನಿಸರ್ಗಧಾಮದಲ್ಲಿ ನಡೆಯಲಿರುವ ಕೋಟಿ-ಚೆನ್ನಯಾ ಉತ್ಸವದಲ್ಲಿ ರಾಣಿ ಅಬ್ಬಕ್ಕ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ.

ಶನಿವಾರ ರಾತ್ರಿ 8.40ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.