ಡಿ.25ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ”ಪ್ರಕಾಶಭಿನಂದನ-60ರ ಸಂಭ್ರಮ” -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿ ಅವರಿಗೆ 60 ವರ್ಷ ತುಂಬಿದ ಹಿನ್ನಲೆಯಲ್ಲಿ ಡಿ.25ರಂದು ಬಂಗ್ರಕೂಳೂರಿನಲ್ಲಿರುವ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಆಯೋಜಿಸಲಾಗಿರುವ “ಪ್ರಕಾಶಭಿನಂದನ-60ರ ಸಂಭ್ರಮ”ವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಲಿದ್ದು , ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವರಾದ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ಸುಮಲತಾ ಅಂಬರೀಷ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಿಟ್ಟೆ ವಿವಿ ಕುಲಾಧಿಪತಿ ಎನ್‌ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಕನ್ನಡ ಸಿನಿಮಾ ರಂಗದ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಿಸಲಿದ್ದು ಅರ್ಜುನ್‌ ಜನ್ಯ ಹಾಗೂ ವಿಜಯ ಪ್ರಕಾಶ್‌ ಅವರಿಂದ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಅನುಶ್ರೀ, ರೂಪೇಶ್‌ ಶೆಟ್ಟಿ, ನಿತೇಶ್‌ ಶೆಟ್ಟಿ ಎಕ್ಕಾರು ನಿರೂಪಿಸಲಿದ್ದಾರೆ.