ಉಡುಪಿ: ಕರಾವಳಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರ ಕೊಡುಗೆಯಾಗಿ ನೀಡಿರುವ ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಥಮ ಪ್ರಯಾಣ ಹಿನ್ನೆಲೆಯಲ್ಲಿ ಡಿಸೆಂಬರ್ 30 ರಂದು ಉಡುಪಿಯಲ್ಲಿ ಅದ್ದೂರಿ ಸ್ವಾಗತ ಸಮಾರಂಭ ಆಯೋಜಿಸಿರುವುದಾಗಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಕರಾವಳಿ ಭಾಗದ ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಆಗಿ ಚಾಲನೆ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಯವರ ಉಪಸ್ಥಿತಿಯಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ.
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಜೂರುಗೊಳಿಸುವ ಮೂಲಕ ಕರಾವಳಿ ಜಿಲ್ಲೆಯ ಪ್ರವಾಸೋದ್ಯಮ, ಮೀನುಗಾರಿಕೆ, ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ನಳಿನ್ ಕುಮಾರ್ ಕಟೀಲ್, ಬಿ. ವೈ. ರಾಘವೇಂದ್ರ, ಅನಂತ್ ಕುಮಾರ್ ಹೆಗಡೆ ಯವರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…