Featured

ಡಿ. 6 ಮತ್ತು 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ” – vishwanews24

ಡಿ. 6 ಮತ್ತು 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ”

ಉಡುಪಿ: ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಉಡುಪಿ ಮತ್ತು ರಾಷ್ಟ್ರ ಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಇದರ ಸಹಯೋಗದಲ್ಲಿ ‘ಕರಾವಳಿ ಭಜನಾ ಸಮಾವೇಶ’ ಎಂಬ ಎರಡು ದಿನಗಳ ಸಮಾವೇಶವನ್ನು ಡಿ. 6 ಮತ್ತು 7ರಂದು ಉಡುಪಿ ಎಂಜಿಎಂ ಕಾಲೇಜು ಆವರಣದ ಟಿ. ಮೋಹನದಾಸ್ ಪೈ ಅಮೃತ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಸಂಚಾಲಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ತಿಳಿಸಿದರು.

ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ನೀಡಿದ ಅವರು, ಡಿ.6ರಂದು ಬೆಳಿಗ್ಗೆ 10ಗಂಟೆಗೆ ಹಿರಿಯ ವಿದ್ವಾಂಸ ಡಾ. ಬಿ. ಎ ವಿವೇಕ ರೈ ಸಮಾವೇಶವನ್ನು‌ ಉದ್ಘಾಟಿಸಲಿದ್ದಾರೆ. ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ ತ ಚಿಕ್ಕಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಹೆ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಸಮಾವೇಶದಲ್ಲಿ ಮಹಾಲಕ್ಷ್ಮೀ ಮೊಗವೀರ ಭಜನಾ ಮಂಡಳಿ, ರಾಗ ರಂಜಿನಿ ತಂಡ, ಶ್ರೀ ಮಹಾಗಣಪತಿ ಭಜನಾ ಮಂಡಳಿ, ಜಿ.ಎಸ್.ಬಿ ಮಹಿಳಾ ಮಂಡಳಿ, ಶ್ರೀ ಮಾರಿಕಾಂಬ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಯಕ್ಷಿ ಕಲ್ಲುಕುಟಿಗ ಭಜನಾ ಮಂಡಳಿ, ರಂಗಚಿನ್ನಾರಿಯ ಸ್ಮರಚಿನ್ನಾರಿ ಭಜನಾ ಮಂಡಳಿ, ಸರ್ವೇಶ್ವರೀ ಭಜನಾ ಮಂಡಳಿ, ಬಾಲವಿಕಾಸ ಭಜನಾ ಮಂಡಳಿ, ಶ್ರೀ ವೀರಭದ್ರ ಗುರು ಮಾಚಿದೇವ ಭಜನಾ ಮಂಡಳಿ, ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶ್ರೀ ಬಾಲಾಜಿ ಕಲಾ ಭಜನಾ ಮಂಡಳಿ ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ತಂಡ ಸೇರಿ ಒಟ್ಟು 13 ಭಜನಾ ತಂಡಗಳು ಭಜನೆಗಳನ್ನು ಹಾಡಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತ ಅಧಿಕಾರಿ ಡಾ. ಜಗದೀಶ್ ಶೆಟ್ಟಿ, ಭಜನಾ ಸಮಾವೇಶದ ಸಂಯೋಜಕ ರವಿರಾಜ್ ಎಚ್‌.ಪಿ., ಸಹ ಸಂಶೋಧಕ ಅರುಣ್ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

15 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago