Featured

ಡಿ. 8 ಭಾರತ್ ಬಂದ್ : ಉಡುಪಿಯಲ್ಲಿ ಬೆಂಬಲವಿಲ್ಲ : ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ -Vishwanews24

ಡಿ. 8 ಭಾರತ್ ಬಂದ್ : ಉಡುಪಿಯಲ್ಲಿ ಬೆಂಬಲವಿಲ್ಲ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ

ಉಡುಪಿ: ಡಿ. 8 ರಂದು ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಕನ್ನಡ ಪರ ಸಂಘಟನೆಗಳು ಈ ಭಾರತ್ ಬಂದ್‌ ಗೆ ಬೆಂಬಲ ನೀಡಲ್ಲ ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಪ್ರವೀಣ್ ಶೆಟ್ಟಿ ಕೊರೋನಾ ಸಂಕಟದಿಂದ ಜನತೆ ಅತೀವ ತೊಂದರೆಯಲ್ಲಿದ್ದಾರೆ. ರಾಜ್ಯದ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದ ಸಾಕಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾರು, ಆಟೋ ಚಾಲಕರು ಬೀದಿಗೆ ಬಂದಿದ್ದಾರೆ. ಶನಿವಾರ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ಕೊಟ್ಟಿದ್ದರು.

ಜನರು ಸಮಸ್ಯೆಯಲ್ಲಿರುವಾಗ ಮತ್ತೆ ಮತ್ತೆ ಬಂದ್ ಗೆ ಕರೆ ನೀಡುವುದು ಸರಿಯಲ್ಲ. ರೈತರ ಹೋರಾಟಕ್ಕೆ ಸದಾಕಾಲ ನಮ್ಮ ಬೆಂಬಲವಿದೆ. ಯಾವುದೇ ಕಾರಣಕ್ಕೂ ಡಿ. 8 ರ ಭಾರತ್ ಬಂದ್ ಗೆ ಬೆಂಬಲವಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

5 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

5 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago