Featured

ಡೀಸೆಲ್ ದರ ಏರಿಕೆ : ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ – vishwanews24

ಡೀಸೆಲ್ ದರ ಏರಿಕೆ : ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್ ದರ ಏರಿಕೆ  ಖಂಡಿಸಿ ಏಪ್ರಿಲ್‌ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ತೆರಳುವ ಸರಕು ಸಾಗಣೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ.

ಪ್ರಸ್ತುತ ಡಿಸೇಲ್ ದರ ಹೆಚ್ಚಳ, ರಾಜ್ಯ ಹೆದ್ದಾರಿಗಳಿಗೆ ಟೋಲ್ ಅಳವಡಿಕೆ ಹಣ ವಸೂಲಿ, ಆರ್‌ಟಿಓ ಬಾರ್ಡರ್ ಚೆಕ್ ಪೋಸ್ಟ್, FC ಶುಲ್ಕ ಹೆಚ್ಚಿಸಿರುವುದು, ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ನೋ ಎಂಟ್ರಿ, ಚಾಲಕರ ಮೇಲೆ ಹಲ್ಲೆ ಹೀಗೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆ‌ರ್.ಷಣ್ಮುಖಪ್ಪ ತಿಳಿಸಿದ್ದಾರೆ.

ಆಲ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್‌ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಕರ್ನಾಟಕ ಗೂಡ್ಸ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಏರ್ ಪೋರ್ಟ್ ಟ್ಯಾಕ್ಸಿ ಅಸೋಸಿಯೇಷನ್, ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಅಸೋಸಿಯೇಷನ್, ಜಲ್ಲಿ ಕಲ್ಲು, ಮರಳು ಲಾರಿ ಅಸೋಸಿಯೇಷನ್, ರಾಜ್ಯ ಪಡಿತರ ಆಹಾರ ಧಾನ್ಯಗಳ ಸಾಗಾಣಿಕೆದಾರರ ಸಂಘ, ಸೌಥ್ ಜೋನ್ ಲಿಪಿಜಿ ಅಸೋಸಿಯೇಷನ್, ಜಲ್ಲಿ, ಮರಳು ಸಾಗಣೆ ವಾಹನಗಳು, ಗ್ಯಾಸ್ ಟ್ಯಾಂಕ್ ಮಾಲೀಕರ ಸಂಘ ಸಹಿತ 69 ಸಂಘಟನೆಗಳು ಮುಷ್ಕರ ಬೆಂಬಲಿಸಿವೆ. ರಾಜ್ಯದಲ್ಲಿ ಸುಮಾರು 700 ಗೂಡ್ಸ್‌ ಕಚೇರಿಗಳಿದ್ದು, ಬಂದ್ ಆಗಲಿವೆ. ಈ ಬಗ್ಗೆ ಕೈಗಾರಿಕೆ, ಕಾರ್ಖಾನೆ, ಕಂಪನಿಗಳಿಗೆ ಮುಷ್ಕರದ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಸಹ ಅವರು ತಿಳಿಸಿದ್ದಾರೆ.

ಡೀಸೆಲ್ ದರವನ್ನು 2024ರ ಜೂನ್‌ನಲ್ಲಿ 3 ರೂ. ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ 2 ರೂ. ಹೆಚ್ಚಳ ಮಾಡಿದೆ. ಈ ಏರಿಕೆ ಕೈಬಿಡುವವರೆಗೆ ಮುಷ್ಕರ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ 18 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸಲಾಗುತ್ತಿದೆ. ಬೇರೆ ಯಾವ ರಾಜ್ಯದಲ್ಲಿಯೂ ರಾಜ್ಯ ಹೆದ್ದಾರಿಗೆ ಟೋಲ್‌ ಇಲ್ಲ. ಹಾಗಾಗಿ ರಾಜ್ಯದಲ್ಲಿ ಟೋಲ್ ಸಂಗ್ರಹ ಕೈಬಿಡಬೇಕು. ಗಡಿ ಚೆಕ್‌ಪೋಸ್ಟ್‌ಗಳನ್ನು ರದ್ದುಮಾಡಬೇಕು. ವಾಹನಗಳ ಸಾಮರ್ಥ್ಯ ಅರ್ಹತಾ ಪತ್ರ (ಫಿಟ್‌ನೆಸ್ ಸರ್ಟಿಫಿಕೆಟ್) ನವೀಕರಣಕ್ಕೆ ಶುಲ್ಕವನ್ನು ಹೆಚ್ಚು ಮಾಡಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಅದನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ಸರಕು ಸಾಗಣೆ ವಾಹನಗಳ ಪ್ರವೇಶವನ್ನು ನಿಷೇಧಿಸಿರುವುದು, ಕೇವಲ 5 ಗಂಟೆ ಅವಕಾಶ ನೀಡಿರುವುದನ್ನು ತೆಗೆದುಹಾಕಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದ್ದಾರೆ.

ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?

ಸದ್ಯ ರಾಜ್ಯಾದ್ಯಂತ 6 ಲಕ್ಷ ಸರಕು ಲಾರಿಗಳ ಕಾರ್ಯಾಚರಣೆ ಬಂದ್‌ ಆಗುವುದರಿಂದ ತರಕಾರಿ, ಹಣ್ಣುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಏರ್ ಪೋರ್ಟ್ ಟ್ಯಾಕ್ಸಿ, ಟೂರಿಸ್ಟ್ ಟ್ಯಾಕ್ಸಿ ಸಿಗೋದು ಸಹ ಅನುಮಾನವಿದೆ. ಇದರಿಂದ ಡಿಪೋಗಳಿಗೆ ಪಡಿತರ ಆಹಾರ ಧಾನ್ಯಗಳ ಪೂರೈಕೆ, ಎಲ್‌ಪಿಜಿ ಸಿಲಿಂಡರ್‌ ಸರಬರಾಜು ಹಾಗೂ ಕೆಲ ಪೆಟ್ರೋಲ್ ಬಂಕ್‌ಗಳಲ್ಲಿ ಡಿಸೇಲ್ ವ್ಯತ್ಯಯ ಸಾಧ್ಯತೆ ಇದೆ ಎಂದು ಸಹ ಲಾರಿ ಮಾಲೀಕರು ತಿಳಿಸಿದ್ದಾರೆ

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago