Featured

ಡೆಂಗ್ಯೂ ಫೀವರ್ ಗಳಿಗೆ ದಾಖಲಾದ ರೋಗಿಗಳಿಗೂ ಉಚಿತ ಚಿಕಿತ್ಸೆ ಕೊಡಬೇಕು : ಡಾ. ಮಂಜುನಾಥ್ – vishwanews24

ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ..

ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸಿಸುವವರಿಗೆ ಸೊಳ್ಳೆ ಪರದೆ ಉಚಿತ ನೀಡಿ..

ಬೆಂಗಳೂರು: ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಹೀಗಾಗಿ ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನು ಉಚಿತವಾಗಿ ಕೊಡಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಗೌಡ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಇಲ್ಲ. ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್ ಅನ್ನು ಪ್ಯಾಂಡಮಿಕ್ ಕಾಯಿಲೆ ಎಂದೆವು. ಇದು ಎಂಡಮೆಕ್ ಕಾಯಿಲೆ. ಕೋವಿಡ್ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದು ಹೇಳಿದರು.

ರೋಗ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್ ಗಳ ಬಾಗಿಲು ಮುಚ್ಚಿಸಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು. ಇದನ್ನು ನಿಯಂತ್ರಣ ಮಾಡಲು ಟಾಸ್ಕ್ ಫೋರ್ಸ್ ಮಾಡಬೇಕು. ಬೇಸಿಗೆ ಕಾಲದಲ್ಲೇ ನಾವು ಮಳೆಗಾಲದ ಸಮಸ್ಯೆಗಳಿಗೆ ಪರಿಹಾರ ಮಾಡಬೇಕು. ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ನಾವು ಏನೇನೋ ಫ್ರೀ ಕೊಡ್ತೀವಿ. ಆದರ ಬದಲಾಗಿ ಸ್ಲಂಗಳಲ್ಲಿ, ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆ ಉಚಿತವಾಗಿ ಕೊಡಬೇಕು. ಇದು ನಿಮಗೆ ಹಾಸ್ಯ ಅನಿಸಬಹುದು, ಆದರೆ ಇದು ಸತ್ಯ. ಕೋವಿಡ್ ಸಂಧರ್ಭದಲ್ಲಿ ಉಚಿತ ಚಿಕಿತ್ಸೆ ಕೊಟ್ಟೆವು. ಡೆಂಗ್ಯೂ ಫೀವರ್ ಗಳಿಗೆ ದಾಖಲಾದ ರೋಗಿಗಳಿಗೂ ಉಚಿತ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆ ಗಳಲ್ಲಿ ದಾಖಲಾದ ರೋಗಿಗಳಿಗೂ ಸರ್ಕಾರ ದರ ನಿಗದಿ ಮಾಡಿ, ಸರ್ಕಾರವೇ ಭರಿಸಬೇಕು ಎಂದರು.

ವಾರ್ ರೂಂ ಆಥವಾ ಕಂಟ್ರೋಲ್ ರೂಂ ಆಗಲಿ ಇದಕ್ಕೆ ಮಾಡಬೇಕು. ಮಾನಿಟರ್ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago