Featured

ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ  – vishwanews24

ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಗದಗ: ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಟಗೇರಿ  ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.

ಪೂಜಾ ಅಮರೇಶ ಅಯ್ಯನಗೌಡರ್(27) ಮೃತ ಮಹಿಳೆ. ಪೂಜಾ, ಡೆತ್‌ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೂಜಾಗೆ ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು. ಆಕೆ ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಲ್ಲದೇ ಅತ್ತೆ, ಮಾವ, ಬಾವ ಒಟ್ಟಾಗಿ ಆಕೆಯನ್ನು ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿ, ಬಾವ ವೀರನಗೌಡನಿಗೆ ಥಳಿಸಿದ್ದಾರೆ. ಸ್ಥಳದಲ್ಲಿ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪೂಜಾ, 4 ತಿಂಗಳ ಹಿಂದೆಯಷ್ಟೇ ಅಮರೇಶ ಎಂಬುವವರನ್ನು ಮದುವೆಯಾಗಿದ್ದರು. ಪತಿ ಅಮರೇಶ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರವಷ್ಟೇ ಚೆನ್ನೈಗೆ ಕೆಲಸಕ್ಕೆ ತೆರಳಿದ್ದರು. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago