ಬೆಂಗಳೂರು: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.
ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದ. ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ಮೃತ ವಿದ್ಯಾರ್ಥಿ ಮೂರು ನಂಬರ್ ಬರೆದಿದ್ದಾನೆ. ಪರಿಶೀಲನೆ ನಡೆಸಿದಾಗ ಫೇಕ್ ವಿಡಿಯೋ ಕಾಲ್‌ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಜೊತೆಗೆ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…