ಡೆತ್ ನೊಟ್ ಬರೆದಿಟ್ಟು 10ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣು – vishwanews24
ಡೆತ್ ನೊಟ್ ಬರೆದಿಟ್ಟು 10ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣು
ಬೀದರ್ : 10ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮಂಠಾಳ್ ಗ್ರಾಮದ ನಿವಾಸಿ ಶರತ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಶರತ್ ವ್ಯಾಸಂಗ ಮಾಡುತ್ತಿದ್ದನು. ಅವನ ಹತ್ತಿರ SORRY ಮಮ್ಮಿ, ಪಪ್ಪಾ I LOVE YOU.. keep smile forever ಎಂದು ಬರೆದಿರುವ ಚೀಟಿ ಸಿಕ್ಕಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :
ಘಟನಾ ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
