ರಾಜ್ಯ ನ್ಯೂಸ್

ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು – vishwanews24

ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ತುಮಕೂರು : ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸದಾಶಿವ ನಗದರಲ್ಲಿ ಭಾನುವಾರ ನಡೆದಿದೆ.

ಡೆತ್ ನೋಟ್ ಬರೆದಿಟ್ಟು, ಮೂವರು ಮಕ್ಕಳಿಗೆ ವಿಷ ಕುಡಿಸಿ ದಂಪತಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಸ್‌ ಪಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದಾಶಿವನಗರ ನಿವಾಸಿ ಗರೀಬ್ ಸಾಬ್ (32) , ಪತ್ನಿ ಸುಮಯ್ಯ (30) , ಪುತ್ರಿ ಹಾಜಿರಾ(14) , ಪುತ್ರರಾದ ಮೊಹ್ಮದ್ ಸುಭಾನ್(10), ಮೊಹಮದ್ ಮುನೀರ್ (8) ಮೃತರು.

ಕಬಾಬ್ ವ್ಯಾಪಾರದಲ್ಲಿ ಆದಾಯವಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. ಹೀಗಾಗಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಡೆತ್‌ನೋಟ್‌ನಲ್ಲಿ ಬರೆದಿರುವುದು ಕಂಡುಬಂದಿದೆ.

ಸದಾಶಿವ ನಗರದ 3ನೇ ಬಿ ಮಖ್ಯರಸ್ತೆಯಲ್ಲಿರುವ ನಮ್ಮ ಮನೆಯ ಕೆಳಗಡೆಯ ಮನೆಯವರು ನಮಗೆ ಬಹಳ ಕಷ್ಟ ಕೊಟ್ಟಿದ್ದಾರೆ ಅವರ ವಿರುದ್ಧ ಗೃಹಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಗರೀಬ್ ಸಾಬ್ ಮನವಿ ಮಾಡಿದ್ದಾರೆ.

ಬಡತನದಲ್ಲಿ ಹೇಗೋ ಜೀವನ ಮಾಡಿಕೊಂಡಿದ್ದೆವು. ನಾವು ಬಾಡಿಗೆ ಮನೆಯಲ್ಲಿದ್ದೆವು, ಖಲಂದರ್ ಬಾಡಿಗೆಯಲ್ಲಿದ್ದ ನಾವು ಸಂಘದಲ್ಲಿ ಎರಡು ಸಾವಿರ ಕಮಿಷನ್ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದೆವು. ಇವನ ಮಾತು ಕೇಳದೆ ಇದ್ದರೆ ಪೂರ್ತಿ ಸಾಲ ಕಟ್ಟು ಅಂತ ಹಿಂಸೆ ಕೊಡುತ್ತಿದ್ದ.

ಸಾಲ ಕೊಟ್ಟವರಿಗೆ ಇಲ್ಲಸಲ್ಲದ್ದು ಹೇಳಿ ಗಲಾಟೆ ಮಾಡೋ ಹಾಗೆ ಮಾಡಿದ್ದ. ಇದೇ ರೀತಿ ಅವನ ದೊಡ್ಡ ಮಗ, ಮಗಳು, ಮಹಡಿ ಮನೆಯ ಶಬಾನಾ, ಅವಳ ಮಗಳು ಎಲ್ಲರೂ ತೊಂದರೆ ಕೊಟ್ಟಿದ್ದಾರೆ. ನಾವು ಸಾಯೋಕೆ ಈ 5 ಜನರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಮೃತ ಗರೀಬ್‌ ಸಾಬ್‌ ಬರೆದಿದ್ದಾರೆ.

ಪೊಲೀಸರು ಈ ಐವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

54 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago