ಬೆಳಗಾವಿ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಖಡಕ್ ನಿರ್ಬಂಧ ಹೇರಲಾಗಿದ್ದು, ಪುಣೆಯಿಂದ ಹುಬ್ಬಳ್ಳಿ ಕಡೆಗೆ ಸಾರಿಗೆ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರ ಕೊರೊನಾ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹಾಗೂ ಲಸಿಕಾ ಪ್ರಮಾಣ ಪತ್ರ ಇಲ್ಲದ್ದಕ್ಕೆ ಬಸ್ ಅನ್ನು ಕೊಗೊಳ್ಳಿ ಚೆಕ್ ಪೋಸ್ಟ್ ದಿಂದ ಪುಣೆಗೆ ವಾಪಸ್ ಕಳುಹಿಸಲಾಗಿದೆ.
ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಖಡಕ್ ತಪಾಸಣೆ ಮುಂದುವರಿಸಿರುವ ಪೊಲೀಸರು ಗಡಿ ದಾಟಿ ಕನಾಟಕಕ್ಕೆ ಬರುತ್ತಿರುವ ಪ್ರತಿಯೊಬ್ಬರ ವರದಿಯನ್ನು ತಪಾಸಣೆ ನಡೆಸಿದ್ದಾರೆ.
ಪುಣೆಯಿಂದ ಬರುತ್ತಿದ್ದ ಬಸ್‌ನಲ್ಲಿ ಸುಮಾರು 14-15 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದರು. ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ಯಾವೊಬ್ಬ ಪ್ರಯಾಣಿಕರ ಬಳಿಯೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರಲಿಲ್ಲ. ಜತೆಗೆ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವೂ ಇರಲಿಲ್ಲ. ಹೀಗಾಗಿ ಪೊಲೀಸರು ಬಸ್ ವಾಪಸ್ ಕಳುಹಿಸಿದ್ದಾರೆ. ಜತೆಗೆ ಕೆಲವು ಖಾಸಗಿ ಬಸ್‌ಗಳನ್ನೂ ವಾಪಸ್ ಕಳುಹಿಸಲಾಗಿದೆ.
ಡಿವೈಎಸ್‌ಪಿ ಮನೋಜಕುಮಾರ ನಾಯಿಕ, ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್‌ಐ ಅನಿಲ್ ಕುಂಬಾರ ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಚೆಕ್ ಪೋಸ್ಟ್ ನಲ್ಲಿ ಕಂದಾಯ, ಆರೋಗ್ಯ ಹಾಗೂ ಇಲಾಖೆ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸಿ, ಪ್ರಯಾಣಿಕರ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಪರಿಶೀಲಿಸಿ ಕರ್ನಾಟಕದ ಒಳಗೆ ಬಿಡುತ್ತಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಕಡ್ಡಾಯವಾಗಿ ಪ್ರಯಾಣಿಕರನ್ನು ತಪಾಸಣೆ ನಡೆಸಿಯೇ ಒಳಗೆ ಬೀಡಬೇಕು ಎಂದು ಸೂಚನೆ ನೀಡಿದರು.
ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ಮಹಾರಾಷ್ಟçದಿಂದ ಕರ್ನಾಟಕಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಆರ್‌ಟಿಪಿಸಿಆರ್ ರಿಪೋರ್ಟ್ ಹೊಂದುವುದು ಕಡ್ಡಾಯವಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…