ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

Featured, ರಾಷ್ಟ್ರ ನ್ಯೂಸ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ  ಅವರು ಇಂಡಿಯನ್ ಪ್ರೀಮಿಯರ್ ಲೀಗ್  ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಈ ಮಹತ್ವದ ನಿರ್ಧಾರವನ್ನು ಡೆಲ್ಲಿ ಕ್ಯಾಪಿಟಲ್ಸ್ ಆಡಳಿತ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.

2019ರಲ್ಲಿ ಸಲಹೆಗಾರರಾಗಿ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಕೈಜೋಡಿಸಿದ್ದ ಗಂಗೂಲಿ, ಬಳಿಕ ಪುರುಷ ಹಾಗೂ ಮಹಿಳಾ ಎರಡೂ ತಂಡಗಳ ‘ಡೈರೆಕ್ಟರ್ ಆಫ್ ಕ್ರಿಕೆಟ್’ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಇದೀಗ ಮುಂಬರುವ ಐಪಿಎಲ್ ಆವೃತ್ತಿಗಾಗಿ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: 

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೋಚ್ ಆಗಿ ನೇಮಕಗೊಂಡ ಬಳಿಕ ಸಂತಸ ಹಂಚಿಕೊಂಡ ಗಂಗೂಲಿ, ಐಪಿಎಲ್‌ನಲ್ಲಿ ಮುಖ್ಯ ಕೋಚ್ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ನನಗೆ ಅಪಾರ ಸಂತೋಷ ತಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ನನ್ನ ಹೃದಯಕ್ಕೆ ಅತ್ಯಂತ ಹತ್ತಿರವಾದ ಫ್ರಾಂಚೈಸಿ. ಮಾಲೀಕರು, ಮ್ಯಾನೇಜ್‌ಮೆಂಟ್, ಸಹಾಯಕ ಸಿಬ್ಬಂದಿ ಹಾಗೂ ಆಟಗಾರರೊಂದಿಗೆ ನನಗೆ ಉತ್ತಮ ಒಡನಾಟವಿದೆ. ನಮ್ಮ ಬಳಿ ಅದ್ಭುತ ಪ್ರತಿಭೆಗಳಿದ್ದು, ಇತ್ತೀಚಿನ ವರ್ಷಗಳಲ್ಲಿ ತಂಡ ಅತ್ಯುತ್ತಮ ಕ್ರಿಕೆಟ್ ಆಡಿದೆ. ಹೊಸ ಸೀಸನ್‌ನಲ್ಲಿ ಇಡೀ ತಂಡದೊಂದಿಗೆ ಕೆಲಸ ಮಾಡಿ, ಬಲಿಷ್ಠ ಹಾಗೂ ನಿರ್ಭೀತ ತಂಡವನ್ನು ಕಟ್ಟಲು ನಾನು ಕಾತರನಾಗಿದ್ದೇನೆ ಎಂದು ಹೇಳಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಅಧ್ಯಕ್ಷ ಮತ್ತು ಸಹ-ಮಾಲೀಕ ಪಾರ್ಥ್ ಜಿಂದಾಲ್ ಪ್ರತಿಕ್ರಿಯಿಸಿ, ದಾದಾ ಯಾವಾಗಲೂ ಡೆಲ್ಲಿ ಕ್ಯಾಪಿಟಲ್ಸ್ ಕುಟುಂಬದ ಅವಿಭಾಜ್ಯ ಅಂಗ. ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ ಹಾಗೂ ಆಡಳಿತಗಾರರೊಬ್ಬರು ಈಗ ನಮ್ಮ ತಂಡದ ಮುಖ್ಯ ಕೋಚ್ ಆಗಿ ಕೋಚಿಂಗ್ ಕ್ಷೇತ್ರಕ್ಕೆ ಕಾಲಿಡುತ್ತಿರುವುದು ನಮಗೆ ಹೆಮ್ಮೆಯ ಸಂಗತಿ. ಅವರ ಅನುಭವ, ನಾಯಕತ್ವ ಹಾಗೂ ದೂರದೃಷ್ಟಿ ತಂಡವನ್ನು ಐಪಿಎಲ್ ಪ್ರಶಸ್ತಿ ಗೆಲ್ಲುವಂತೆ ಸಜ್ಜುಗೊಳಿಸಲಿದೆ. ನಮ್ಮ ಆಟಗಾರರು ಮತ್ತು ಸಿಬ್ಬಂದಿ ಅವರಿಂದ ಸಾಕಷ್ಟು ಕಲಿಯಲು ಉತ್ಸುಕರಾಗಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: 

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

Leave a Reply