Featured

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್(35) ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಪೊಲೀಸರು ಅನುಜ್ ಪಾಟೀಲ್‌ನನ್ನು ಹೆಬ್ರಿಗೆ ಕರೆದೊಯ್ಯುತ್ತಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಅವರ ಬಳಿಯಿದ್ದ ಶಸ್ತ್ರಾಸ್ತ್ರವನ್ನು ಕಸಿದುಕೊಂಡು ಗುಂಡು ಹಾರಿಸಲು ಆರೋಪಿ ಪ್ರಯತ್ನಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಕುಂದಾಪುರ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ನಂಜ ನಾಯಕ್ ಅವರು ಗುಂಡು ಹಾರಿಸಿದ್ದು, ಗುಂಡು ಅನುಜ್ ಪಾಟೀಲ್‌ನ ಕಾಲಿಗೆ ತಗುಲಿದೆ. ಬಳಿಕ ಗಾಯಗೊಂಡ ಆರೋಪಿಯನ್ನು ತಕ್ಷಣ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ.

ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಅನುಜ್ ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಶೂಟರ್‌ಗಳಾದ ರಾಜು ಹಾಗೂ ಆತನ ತಂಡವನ್ನು ಗುತ್ತಿಗೆ ಹತ್ಯೆಗಾಗಿ ಕಳುಹಿಸುವ ಮೂಲಕ ಪ್ರಕರಣದ ಕಾರ್ಯಾಚರಣೆಗೆ ಅಗತ್ಯ ಲಾಜಿಸ್ಟಿಕ್ಸ್ ವ್ಯವಸ್ಥೆ ಮಾಡಿದ್ದಾನೆ ಎಂಬ ಆರೋಪವಿದೆ.

ಬಿಹಾರ ಮೂಲದ ಅನುಜ್ ಪಾಟೀಲ್ ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಎನ್ನಲಾಗಿದ್ದು, 2017ರಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ. ಸಂಘಟಿತ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಸಂಘಟಿತ ಅಪರಾಧ ತಡೆ ಕಾಯ್ದೆ (MCOCA) ಅಡಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರ, ಗುಜರಾತ್, ದಮನ್ ಮತ್ತು ದಿಯು ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆ ಅನುಜ್ ಪಾಟೀಲ್ ವಿರುದ್ಧ ಒಟ್ಟು 11 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿರುವುದು ಗಮನಾರ್ಹವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

1 hour ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

1 hour ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

1 hour ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago