ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಶೂಟರ್‌ಗಳಿಗೆ ಬೈಕ್ ಒದಗಿಸಿದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬೈಂದೂರು ಬಾಳಿಹಿತ್ಲು ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ.
ಆರೋಪಿ ಲೋಕೇಶ್ ಈ ಹಿಂದೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾಗ, ಈ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ರಾಮ ಪೂಜಾರಿಯ ಪರಿಚಯವಾಗಿ ಆತನೊಂದಿಗೆ ಸ್ನೇಹ ಬೆಳೆಸಿದ್ದನು. ಕೃತ್ಯ ಎಸಗಲು ನೇರವಾಗಿ ಭಾಗಿಯಾಗಿದ್ದ ಶೂಟರ್‌ಗಳಾದ ಅನ್ಮೋಲ್ ರಸ್ತೋಗಿ ಹಾಗೂ ರಾಜು ಎಂಬುವವರಿಗೆ ಲೋಕೇಶ್ ಬೈಕ್ ಒದಗಿಸಿದ್ದಲ್ಲದೆ, ಇತರ ಆರೋಪಿಗಳೊಂದಿಗೆ ಸೇರಿ ಕೊಲೆ ನಡೆಸಲು ಸಂಚು ರೂಪಿಸಿದ್ದನು.
ವಿಶೇಷ ಕಾರ್ಯಾಚರಣೆಯಲ್ಲಿದ್ದ ಕಾರ್ಕಳ-ಪಡುಬಿದ್ರೆ ಪೊಲೀಸರು ಬೈಂದೂರಿನ ಯಡ್ತರೆ ಎಂಬಲ್ಲಿ ಆರೋಪಿ ಲೋಕೇಶ್ ತೇಜ ಕೊಠಾರಿಯನ್ನು ವಶಕ್ಕೆ ಪಡೆದು ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಆಗಸ್ಟ್ 21ರಂದು ಆತನನ್ನು ಅಧಿಕೃತವಾಗಿ ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಬೈಕಿನ ಎಂಜಿನ್ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಯನ್ನು ಅಳಿಸಲು (ಉಜ್ಜಲು) ಬಳಸಿದ್ದ ಗ್ರೈಂಡಿಂಗ್ ಯಂತ್ರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ…
ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…
ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು: ಕೃಷಿ…