Featured

ಡೋಪಿಂಗ್ ಟೆಸ್ಟ್​ನಲ್ಲಿ ಸಿಕ್ಕಿಬಿದ್ದ ಭಾರತದ ಅಗ್ರಮಾನ್ಯ ಜಾವೆಲಿನ್​ಪಟು: ಶಿವಪಾಲ್​ ಸಿಂಗ್​ಗೆ 4 ವರ್ಷ ಅಮಾನತು ಶಿಕ್ಷೆ – Vishwanews24

ಡೋಪಿಂಗ್ ಟೆಸ್ಟ್​ನಲ್ಲಿ ಸಿಕ್ಕಿಬಿದ್ದ ಭಾರತದ ಅಗ್ರಮಾನ್ಯ ಜಾವೆಲಿನ್​ಪಟು: ಶಿವಪಾಲ್​ ಸಿಂಗ್​ಗೆ 4 ವರ್ಷ ಅಮಾನತು ಶಿಕ್ಷೆ

ದೆಹಲಿ: ಕಳೆದ ವರ್ಷ ಡೋಪಿಂಗ್ ಟೆಸ್ಟ್‌ನಲ್ಲಿ ಸಿಕ್ಕಿಬಿದ್ದ ಭಾರತದ ಅಗ್ರಮಾನ್ಯ ಜಾವೆಲಿನ್ ಎಸೆತಗಾರ ಶಿವಪಾಲ್ ಸಿಂಗ್ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ  ನಾಲ್ಕು ವರ್ಷಗಳ ಕಾಲ ಅಮಾನತುಗೊಳಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ ಶಿವಪಾಲ್ ಅವರನ್ನು ಡೋಪಿಂಗ್​ ಸ್ಯಾಂಪಲ್​ ಪರೀಕ್ಷೆ ನಡೆಸಲಾಗಿತ್ತು. ಆದ್ರೆ, ಈ ಪರೀಕ್ಷೆಯಲ್ಲಿ ಶಿವಪಾಲ್ ವಿಫಲರಾಗಿದ್ದು, ಈತ ನಿಷೇಧಿತ ವಸ್ತು ಮೆಟಾಂಡಿಯೊನೊನ್ ಸೇವಿಸಿರುವುದು ದೃಢಪಟ್ಟಿತ್ತು.

ಅಗತ್ಯ ಬಿದ್ದರೆ ವಿದ್ಯುತ್ ದರ ಏರಿಕೆ ನಿಯಮ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ..

27 ವರ್ಷದ ಉತ್ತರ ಪ್ರದೇಶದ ಅಥ್ಲೀಟ್‌ಗೆ ನಿಷೇಧದ ಅವಧಿಯು ಕಳೆದ ವರ್ಷ ಅಕ್ಟೋಬರ್ 21 ರಿಂದಲೇ ಅಮಾನತಿನಲ್ಲಿದ್ದರು. ಇದೀಗ ಅವರ ಅನರ್ಹತೆಯ ಅವಧಿಯನ್ನು ಅಕ್ಟೋಬರ್ 2025 ರವರೆಗೆ ವಿಸ್ತರಿಸಲಾಗಿದೆ. ವಾಸ್ತವವಾಗಿ, ಡೋಪಿಂಗ್ ವಿರೋಧಿ ಶಿಸ್ತಿನ ಸಮಿತಿಯು ಆಗಸ್ಟ್‌ನಲ್ಲಿ ನಿರ್ಧಾರವನ್ನು ನೀಡಿತು. ಆದ್ರೆ, ರಾಷ್ಟ್ರೀಯ ಡೋಪಿಂಗ್ ವಿರೋಧಿ ಏಜೆನ್ಸಿಯ ವೆಬ್‌ಸೈಟ್‌ನಲ್ಲಿ ಯಾವುದೇ ವಿವರವಾದ ಆದೇಶವನ್ನು ಅಪ್‌ಲೋಡ್ ಮಾಡಲಾಗಿಲ್ಲ.

ದೋಹಾದಲ್ಲಿ ನಡೆದ 2019 ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಶಿವಪಾಲ್ 86.23 ಮೀ ಎಸೆಯುವ ಮೂಲಕ ಬೆಳ್ಳಿ ಪದಕವನ್ನು ಗೆದ್ದರು. ಇದು ಅವರ ವೈಯಕ್ತಿಕ ಅತ್ಯುತ್ತಮ ಪ್ರಯತ್ನವಾಗಿದೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

11 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

11 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

11 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

12 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

12 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

12 hours ago