ಡ್ರಗ್ಸ್ ಪ್ರಕರಣ: ಆರ್ಯನ್‌ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ : ಬಾಂಬೆ ಹೈಕೋರ್ಟ್ – Vishwanews24

Featured, ರಾಷ್ಟ್ರ ನ್ಯೂಸ್

ಡ್ರಗ್ಸ್ ಪ್ರಕರಣ: ಆರ್ಯನ್‌ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ : ಬಾಂಬೆ ಹೈಕೋರ್ಟ್ – Vishwanews24

ಮುಂಬೈ : ಡ್ರಗ್ಸ್‌ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಬಾಲಿವುಡ್‌ ನಟ ಶಾರೂಕ್‌ ಖಾನ್ ಪುತ್ರ ಆರ್ಯನ್‌ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.

ತುರ್ತು ವಿಚಾರಣೆಗೆ ಕೋರಿ ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನಶಿಂಧೆ ಅವರುನ್ಯಾಯಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ಪೀಠದ ಎದುರು ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ವೇಳೆ ಎನ್‌ಸಿಬಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಆರೋಪಿಯನ್ನು ವಿಚಾರಣೆ ನಡೆಸಲು ಮುಂದಿನವಾರದವರೆಗೆ ಸಮಯಾವಕಾಶ ಕೋರಿದರು. ಹೀಗಾಗಿ ನ್ಯಾಯಮೂರ್ತಿ ಸಾಂಬ್ರೆ ಅವರು ಅರ್ಜಿ ವಿಚಾರಣೆಯನ್ನು ಅ.26ಕ್ಕೆ ಮುಂದೂಡಿದ್ದಾರೆ.

ಇನ್ನು ಅದೇ ದಿನ ಈ ಪಕ್ರಣದಲ್ಲಿ ಸಹ ಆರೋಪಿಯಾಗಿರುವ ಮುನ್ಮುನ್ ಧಮೇಚಾ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಲಿದೆ.

ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯವರು ಬುಧವಾರ ಸಂಜೆ ಆರ್ಯನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಆರೋಪಿ ಪರ ವಕೀಲರು ಅಂದು ಸಂಜೆಯೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಉಡುಪಿ : ಅವಿಭಜಿತ ಜಿಲ್ಲೆಯಲ್ಲಿ ಓಸ್ಕರ್ ಫೆರ್ನಾಂಡಿಸ್ ಮಾಡಿದಂತಹ ಅಭಿವೃದ್ದಿ ಕೆಲಸಗಳು ಅವಿಸ್ಮರಣೀಯ : ರಮಾನಾಥ ರೈ – Vishwanews24