ಮುಂಬೈ : ಡ್ರಗ್ಸ್ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.
ತುರ್ತು ವಿಚಾರಣೆಗೆ ಕೋರಿ ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನಶಿಂಧೆ ಅವರುನ್ಯಾಯಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ಪೀಠದ ಎದುರು ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ವೇಳೆ ಎನ್‌ಸಿಬಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಆರೋಪಿಯನ್ನು ವಿಚಾರಣೆ ನಡೆಸಲು ಮುಂದಿನವಾರದವರೆಗೆ ಸಮಯಾವಕಾಶ ಕೋರಿದರು. ಹೀಗಾಗಿ ನ್ಯಾಯಮೂರ್ತಿ ಸಾಂಬ್ರೆ ಅವರು ಅರ್ಜಿ ವಿಚಾರಣೆಯನ್ನು ಅ.26ಕ್ಕೆ ಮುಂದೂಡಿದ್ದಾರೆ.
ಇನ್ನು ಅದೇ ದಿನ ಈ ಪಕ್ರಣದಲ್ಲಿ ಸಹ ಆರೋಪಿಯಾಗಿರುವ ಮುನ್ಮುನ್ ಧಮೇಚಾ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಲಿದೆ.
ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯವರು ಬುಧವಾರ ಸಂಜೆ ಆರ್ಯನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಆರೋಪಿ ಪರ ವಕೀಲರು ಅಂದು ಸಂಜೆಯೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…