Featured

ದೇವರ ಫೋಟೋ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಗ್ಯಾಂಗ್​ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ.-vishwanews24

ಬೆಂಗಳೂರು: ಗಣಪತಿ ದೇವರ ಫೋಟೋ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಗ್ಯಾಂಗ್​ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ಅರುಣ್ ಆಂಥೋನಿ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಅಮಲ್‌ ಬೈಜು ಪರಾರಿಯಾಗಿದ್ದಾನೆ. ಅರುಣ್, ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿಯ ಸ್ಪರ್ಶ್ ಮತ್ತು ಹೆಲ್ತ್ ಸಿಟಿಯಲ್ಲಿ ಎಕ್ಸ್ ರೇ ಟೆಕ್ನಿಶಿಯನ್​ ಆಗಿ ಕೆಲಸ ಮಾಡುತ್ತಿದ್ದ. ಕಸ್ಟಮ್ಸ್​ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಹೆಬ್ಬುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಟ್ಟಾಯಂನಿಂದ ಕೋರಿಯರ್ ಮೂಲಕ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​ ಸಾಗಿಸಲಾಗುತ್ತಿತ್ತು. ಸ್ಟ್ಯಾಂಪ್ ಮೇಲೆ ಗಣಪತಿ ಫೋಟೋ ಹಾಕಿ ಮಾರಾಟ ಮಾಡಲಾಗುತ್ತಿತ್ತು. ದೇವರ ಸ್ಟ್ಯಾಂಪ್ ಅಂದ್ರೆ ಅನುಮಾನ ಬರುವುದಿಲ್ಲ ಎಂದು ಖದೀಮರು ಖತರ್ನಾಕ್ ಐಡಿಯಾ ಮಾಡಿದ್ದರು. ಆದ್ರೆ ಬೆಂಗಳೂರಿನಲ್ಲಿ ಡ್ರಗ್ಸ್​​ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋರಿಯರ್ ಮತ್ತು ಪೋಸ್ಟ್‌ ಮೇಲೆ ಕಣ್ಣಿಟ್ಟಿದ್ದ ಕಸ್ಟಮ್ಸ್​​​​ ಅಧಿಕಾರಿಗಳು ಕೊನೆಗೂ ಈ ಚಾಲಾಕಿ ಗ್ಯಾಂಗ್​ಅನ್ನು ಹೆಡೆಮುರಿ ಕಟ್ಟಿದ್ದಾರೆ.

ಇನ್ನು ಒಂದು ಸ್ಟ್ಯಾಂಪ್ 4 ಸಾವಿರ ರೂ.ಗೆ ಮಾರಾಟವಾಗುತ್ತಿತ್ತು. ಒಟ್ಟು 400 ಕ್ಕೂ ಹೆಚ್ಚು ಸ್ಟ್ಯಾಂಪ್ ಬಂದಿದ್ದು, ಒಟ್ಟಾರೆ 15 ಲಕ್ಷ ರೂ. ಮಾಲ್ಯದ ಡ್ರಗ್ಸ್​​ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಈ ದಂಧೆ ಮಾಡುತ್ತಿದ್ದು, ಪಬ್ ಮತ್ತು ಶ್ರೀಮಂತರ ಪಾರ್ಟಿಗಳನ್ನೇ ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ ವಿಚಾರವನ್ನು ಆರೋಪಿಗಳು ತನಿಖೆ ವೇಳೆ ತಿಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

10 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

16 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

16 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

17 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

19 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

19 hours ago