ಢಾಕಾ: ಬಾಂಗ್ಲಾದೇಶದ ನದಿಯೊಂದರಲ್ಲಿ ಪ್ರಯಾಣಿಕರು ಮತ್ತು ಸರಕುಗಳನ್ನು ಸಾಗಿಸುತ್ತಿದ್ದ ಹಡಗಿಗೆ ಬೆಂಕಿಹೊತ್ತಿಕೊಂಡ ಪರಿಣಾಮ ಸುಮಾರು 32 ಮಂದಿ ದುರ್ಮರಣಕ್ಕೀಡಾಗಿದ್ದಾರೆ.ಘಟನೆಯನ್ನು ಸುಮಾರು 200 ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು (ಡಿ.24) ನಸುಕಿನ ಜಾವ 3 ಗಂಟೆ ಸಮಯದಲ್ಲಿ ಬಾಂಗ್ಲಾದ ಬಾರ್ಗಾನ ಮೂಲದ ಎಂವಿ ಅಭಿಜಾನ್-10 ಹೆಸರಿನ ಪ್ರಯಾಣಿಕರ ಹಡಗಿನ ಇಂಜಿನ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬಳಿಕ ಬೆಂಕಿಯ ಜ್ವಾಲೆ ಹೆಚ್ಚಾಗಿ 36 ಮಂದಿಯನ್ನು ಬಲಿ ಪಡೆದುಕೊಂಡಿದೆ. ಹಡಗು ಢಾಕಾದಿಂದ ಪ್ರಯಾಣ ಬೆಳೆಸಿತ್ತು.
ಮೂರು ಮಹಡಿಯ ಹಡಗಿನಲ್ಲಿ ನದಿಯ ಮಧ್ಯಭಾಗದಲ್ಲಿ ಇದ್ದಾಗ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಳಿಕ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಈವರೆಗೆ 32 ಜನರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನವರು ಬೆಂಕಿಯಿಂದ ಗಂಭೀರ ಸುಟ್ಟಗಾಯಗಳಾಗಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬೆಂಕಿಯಿಂದ ಸುಟ್ಟ ಗಾಯಗಳಾಗಿರುವುದರಿಂದ 100 ಮಂದಿಯನ್ನು ಪಕ್ಕದಲ್ಲಿರುವ ಬರಿಸಲಾನ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂದು ಹೇಳಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…