Featured

ತಂದೆಯನ್ನ ಕೊಂದು, ಕೊಡಲಿಯಿಂದ ತುಂಡು ಮಾಡಿ ಕೊಳವೆ ಬಾವಿಗೆ ಹಾಕಿದ ಮಗ : ಬಾಗಲಕೋಟೆಯಲ್ಲಿ ಭಯಾನಕ ಪ್ರಕರಣ – Vishwanews24

ತಂದೆಯನ್ನ ಕೊಂದು, ಕೊಡಲಿಯಿಂದ ತುಂಡು ಮಾಡಿ ಕೊಳವೆಬಾವಿಗೆ ಹಾಕಿದ ಮಗ : ಬಾಗಲಕೋಟೆಯಲ್ಲಿ ಭಯಾನಕ ಪ್ರಕರಣ

ಬಾಗಲಕೋಟೆ:  ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ.

ನನ್ನ ಗಂಡ ಒಂದು ವಾರದಿಂದ ಕಾಣಿಸ್ತಿಲ್ಲ. ನನಗೆ ನನ್ನ ಮಗನ ಮೇಲೆ ಅನುಮಾನ ಇದೆ. ದಯವಿಟ್ಟು ತನಿಖೆ ಮಾಡಿ ಹುಡುಕಿಕೊಡಿ ಸರ್​… ಎಂದು ಮಹಿಳೆಯೊಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಮಗನನ್ನ ವಶಕ್ಕೆ ಪಡೆದು ತನಿಖೆ ಶುರು ಮಾಡುತ್ತಿದ್ದಂತೆ ಘೋರ ರಹಸ್ಯ ಬಯಲಾಗಿದೆ. ಜನ್ಮ ಕೊಟ್ಟ ತಂದೆಯನ್ನೇ ಕೊಂದು ಶವವನ್ನು ತುಂಡು ತುಂಡು ಮಾಡಿ ಕೊಳವೆಬಾವಿಗೆ ತುರುಕಿರುವುದಾಗಿ ಬಾಯ್ಬಿಟ್ಟಿದ್ದು, ಸ್ಥಳದಲ್ಲಿ ಮೃತದೇಹ ಪತ್ತೆ ಕಾರ್ಯಾಚರಣೆ ಮಂಗಳವಾರ ಬೆಳಗ್ಗೆಯಿಂದ ನಡೆಯುತ್ತಿದ್ದು, ಶವದ ತುಂಡುಗಳು ಪತ್ತೆಯಾಗುತ್ತಿವೆ.

ಮುಧೋಳ ನಗರದ ಪರಶುರಾಮ ಕುಳಲಿ(54) ಕೊಲೆಯಾದ ತಂದೆ. ಮಗ ವಿಠ್ಠಲ ಕುಳಲಿ(20) ಕೊಲೆ ಆರೋಪಿ. ಡಿ.6ರ ರಾತ್ರಿ 12 ಗಂಟೆಯಲ್ಲಿ ರಾಡ್​ನಿಂದ ಹಲ್ಲೆ ಮಾಡಿ ತಂದೆಯನ್ನು ಕೊಂದ ಮಗ, ಬಳಿಕ ಯಾರಿಗೂ ಅನುಮಾನ ಬಾರದಿರಲೆಂದು ಮೃತದೇಹವನ್ನು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಇರುವ ತನ್ನ ಹೊಲಕ್ಕೆ ತೆಗೆದುಕೊಂಡು ಹೋಗಿದ್ದಾನೆ. ಮುಚ್ಚಿದರೆ ಗೊತ್ತಾಗಬಹುದೆಂದು, ಕೊಳವೆಬಾವಿಗೆ ಹಾಕಲು ಯತ್ನಿಸಿದ್ದಾನೆ. ದೇಹ ಒಳಗೆ ತೂರುತ್ತಿಲ್ಲ ಎಂದು ಶವವನ್ನು ಕೊಡಲಿಯಿಂದ ತುಂಡು ತಂಡು ಮಾಡಿ ಕೊಳವೆಬಾವಿಗೆ ಹಾಕಿದ್ದಾನೆ.

ಬಳಿಕ ಒಂದು ವಾರ ಏನೂ ಅರಿಯದಂತೆ ಊರಲ್ಲಿ ಓಡಾಡಿಕೊಂಡಿದ್ದ. ಅನುಮಾನಗೊಂಡ ತಾಯಿ, ಮುಧೋಳ ಠಾಣೆಯಲ್ಲಿ ಮಿಸ್ಸಿಂಗ್​ ಕೇಸ್​ ದಾಖಲಿಸಿದ್ದರು. ಪೊಲಿಸರು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾ ಸತ್ಯ ಬಾಯ್ಬಿಟ್ಟಿದ್ದಾನೆ. ಕುಡಿದ ಮತ್ತಲ್ಲಿ ನನ್ನ ತಂದೆ ನಿತ್ಯ ನನಗೆ ಹೊಡೆಯುತ್ತಿದ್ದ. ಅವಾಚ್ಯವಾಗಿ ಬೈಯ್ಯುತ್ತಿದ್ದ. ಅದಕ್ಕೆ ಸಿಟ್ಟಿನಲ್ಲಿ ರಾಡ್​ನಿಂದ ಹಲ್ಲೆ ಮಾಡಿದೆ. ಗಂಭೀರ ಗಾಯಗೊಂಡು ಮೃತಪಟ್ಟರು. ಪ್ರಕರಣ ಮುಚ್ಚಿಹಾಕಲು ಶವವನ್ನು ಜಮೀನಿಗೆ ತೆಗೆದುಕೊಂಡು ಹೋಗಿ ನಮ್ಮದೇ ಕೊಳವೆಬಾವಿಗೆ ಶವವನ್ನು ಸಣ್ಣ ಸಣ್ಣ ತುಂಡು ಮಾಡಿ ಹಾಕಿದೆ ಎಂದು ವಿವರಿಸಿದ್ದಾನೆ. ಜೆಸಿಬಿಯಿಂದ ಕೊಳವೆಬಾವಿ ಸುತ್ತ ಅಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಒಂದೆರಡು ತುಂಡುಗಳು ಪತ್ತೆಯಾಗಿವೆ. ಮಗನನ್ನು ಪೊಲೀಸರು ಬಂಧಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

11 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

11 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

12 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

12 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

12 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

12 hours ago