ಮಂಗಳೂರು: ಭಾರತೀಯ ಸೇನೆಗೆ ಸೇರಬೇಕು, ದೇಶ ಸೇವೆ ಮಾಡಬೇಕು ಎಂಬ ತಂದೆಯ ಕನಸನ್ನು ಬೆನ್ನಟ್ಟಿ ಸಾಗಿದ ಕುಡ್ಲದ ಹುಡುಗಿ ಮನಿಷಾ ಕೊನೆಗೂ ಕನಸು ನನಸಾಗಿಸಿದ್ದಾಳೆ. ಈ ಮೂಲಕ ಫ್ಲೈಯಿಂಗ್ ಬ್ರ್ಯಾಂಚ್‌ಗೆ ಆಯ್ಕೆಯಾದ ರಾಜ್ಯದ ಏಕೈಕ ಧೀರೆ ಎಂಬ ಹೆಗ್ಗಳಿಕೆ ಮಾತ್ರರಾಗಿದ್ದಾರೆ.
ಅಶೋಕನಗರ ನಿವಾಸಿ ಭಾರತೀಯ ಸ್ಟೇಟ್‌ಬ್ಯಾಂಕ್‌ನ ನಿವೃತ್ತ ಅಧಿಕಾರಿ ಮನೋಹರ ಶೆಟ್ಟಿ ಮತ್ತು ಸರಕಾರಿ ಶಾಲೆ ಮುಖ್ಯೋಪಾಧ್ಯಾಯಿನಿ ಮಾಲತಿ ಶೆಟ್ಟಿ ದಂಪತಿಯ ಪುತ್ರಿ. ಭಾರತೀಯ ವಾಯುಪಡೆಯ ಫ್ಲೈಯಿಂಗ್ ಬ್ರ್ಯಾಂಚ್‌ಗೆ ಆಯ್ಕೆಯಾದ ಮನಿಷಾ ಜು.9ರಂದು ತರಬೇತಿಗೆ ಹೈದರಾಬಾದ್‌ಗೆ ತೆರಳಲಿದ್ದಾರೆ.
ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ಮತ್ತು ಸೈಂಟ್ ಅಲೋಶಿಯಸ್‌ನಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ವಿದ್ಯಾಭ್ಯಾಸ ಪೂರೈಸಿ ಬೆಂಗಳೂರಿನ ರಾಮಯ್ಯ ಕಾಲೇಜಿನ ಬಿಇ ಪದವಿ ಪಡೆದಿದ್ದಾರೆ. ಇದಾದ ಬಳಿಕ ಮರ್ಸಿಡಿಸ್ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು.
ಏರ್‌ಫೋರ್ಸ್‌ಗೆ ಆಯ್ಕೆ 6 ತಿಂಗಳ ಪ್ರಕ್ರಿಯೆಯಾಗಿದ್ದು, ಪ್ರಾರಂಭದಲ್ಲಿ ಏರ್‌ಫೋರ್ಸ್ ಕಾಮನ್ ಎಂಟ್ರೆಸ್ ಎಕ್ಸಾಂ ಬರೆಯಬೇಕು. ದೇಶದ 5 ಕೇಂದ್ರಗಳಲ್ಲಿ (ಮೈಸೂರು, ಗುಜರಾತ್, ಗುವಾಹಟಿ, ವಾರಣಾಸಿ, ಡೆಹ್ರಾಡೂನ್) ಪರೀಕ್ಷೆ ನಡೆದು, ಇದರಲ್ಲಿ ನಿಯಮಿತ ಅಂಕ ತೆಗೆಯಬೇಕು. ಇದರಲ್ಲಿ 250 ವಿದ್ಯಾರ್ಥಿನಿಯರು ವಾಯುಪಡೆಗೆ ಪರೀಕ್ಷೆ ಬರೆದಿದ್ದು, ಇವರಲ್ಲಿ 59 ಮಂದಿ ಎರಡನೇ ಹಂತಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಒಂದು ವಾರ ನಾನಾ ಪರೀಕ್ಷೆ ನಡೆಸಿ ಮತ್ತೊಂದು ಹಂತಕ್ಕೆ 15 ಮಂದಿ ಆಯ್ಕೆ ಮಾಡಲಾಗಿದೆ. ಇದಾದ ಬಳಿಕ ಕಠಿಣ ದೈಹಿಕಾ ಕ್ಷಮತಾ ಪರೀಕ್ಷೆ (ಮೆಡಿಕಲ್ ಟೆಸ್ಟ್) ನಡೆಯುತ್ತದೆ. ಇವರಲ್ಲಿ 5 ಮಂದಿ ಪೈಲಟ್ ಆಯ್ಕೆ ಮಾಡಿದ್ದು, ಇವರಲ್ಲಿ ಮನಿಷಾ ಸೇರಿದಂತೆ 3 ಮಂದಿ ಆಯ್ಕೆಯಾಗಿದ್ದಾರೆ. ಉಳಿದಿಬ್ಬರು ಲಕ್ನೋ ಮತ್ತು ದಿಲ್ಲಿಯವರು. ಪೈಲಟ್‌ಗೆ ಆಯ್ಕೆಯಾಗುವವರು 24 ವರ್ಷದೊಳಗಿರಬೇಕು ಮತ್ತು ಎಸ್‌ಎಸ್‌ಬಿ ಕ್ಲಿಯರ್ ಆದ ಮೇಲೆ ಸಿಪಿಎಸ್‌ಎಸ್ (ಕಂಪ್ಯೂಟರೈಸ್ಡ್ ಪೈಲಟ್ ಸೆಲೆಕ್ಷನ್ ಸಿಸ್ಟಂ) ಪರೀಕ್ಷೆಯನ್ನು ಒಂದೇ ಬಾರಿಗೆ ಪಾಸ್ ಮಾಡಬೇಕು. ಹೀಗಾದರೆ ಮಾತ್ರ ಪೈಲಟ್ ಆಗಲು ಅವಕಾಶ.
ತಂದೆಯ ಕನಸು ನನಸು : ಮನಿಷಾ ಅವರ ತಂದೆ ಮನೋಹರ್ ಶೆಟ್ಟಿ ಈ ಹಿಂದೆ ವಾಯುಪಡೆಗೆ ಆಯ್ಕೆಯಾಗಿದ್ದರು. ಆದರೆ ಇವರ ಅಣ್ಣಾ ಏರ್‌ಫೋರ್ಸ್‌ನಲ್ಲಿದ್ದ ಕಾರಣ ತಂದೆ ಇವರಿಗೆ ಅನುಮತಿ ಕೊಡಲಿಲ್ಲ. ಈ ಕಾರಣದಿಂದ ತನ್ನ ಇಬ್ಬರು ಮಕ್ಕಳಲ್ಲಿ ಒಬ್ಬರನ್ನು ಪೈಲಟ್ ಮಾಡಬೇಕೆಂಬ ಕನಸು ಅವರದಾಗಿತ್ತು. ಇದಕ್ಕಾಗಿ ಬಾಲ್ಯದಿಂದಲೇ ಇಬ್ಬರು ಮಕ್ಕಳ ಚಲನವಲನ, ಆಸಕ್ತಿ ಗಮನಿಸಿ ಮನಿಷಾರನ್ನು ಸೇನೆಗೆ ಸೇರುವಂತೆ ಪ್ರೋತ್ಸಾಹಿಸಿದರು.
ಸಾಮಾನ್ಯವಾಗಿ ಏರ್‌ಪೋರ್ಸ್ ಆಯ್ಕೆಯಾಗಬೇಕಾದರೆ ಕೋಚಿಂಗ್ ಪಡೆಯುತ್ತಾರೆ. ಆದರೆ ಮನಿಷಾ ಯಾವುದೇ ತರಬೇತಿ ಪಡೆಯದೆ ತಂದೆಯ ಮಾರ್ಗದರ್ಶನ ಪಡೆದು ಯೂಟ್ಯೂಬ್‌ನಿಂದಲೇ ಮಾಹಿತಿ ಸಂಗ್ರಹಿಸುತ್ತಿದ್ದರು.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…