Featured

ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ  – Vishwanews24

ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ

ಹಾಸನ: ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ  ಹೇಳಿದ್ದಾರೆ.

ತಂದೆ ರೇವಣ್ಣ  ಅವರ ಮೇಲೂ ಕೇಸ್ ದಾಖಲಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಹೊಳೆನರಸೀಪುರ ಪಟ್ಟಣದಲ್ಲಿ ಮಾತನಾಡಿದ ಅವರು, ರೇವಣ್ಣ ಅವರು ಏನೆಂದು ನಮ್ಮ ಜಿಲ್ಲೆಯ ಜನರಿಗೆ ಗೊತ್ತಿದೆ. ತಾಲೂಕಿನ ಜನರಿಗೆ ಗೊತ್ತಿದೆ. ಅಂತಹ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎನ್ನುವ ಮೂಲಕ ತಮ್ಮ ಕುಟುಂಬದ ವಿರುದ್ಧದ ಆರೋಪಗಳ ಬಗ್ಗೆ ಕಿಡಿ ಕಾರಿದರು.

ರಾಜಕೀಯ ದುರುದ್ದೇಶದಿಂದ ಯಾರು ಏನು ಬೇಕಾದರೂ ಮಾಡುತ್ತಾರೆ. ಜಿಲ್ಲೆಯ ರಾಜಕಾರಣದಲ್ಲಿ ರೇವಣ್ಣ ಅವರಿಗೆ ಪ್ರತಿರೋಧ ಅಥವಾ ಪ್ರತಿಸ್ಪರ್ಧಿ ಇಲ್ಲ. ಅವರ ರೀತಿ ರಾಜಕಾರಣ ಮಾಡಿದವರು ಇಲ್ಲ. ಅವರನ್ನು ಸಿಲುಕಿಸಬೇಕು, ದುರ್ಬಲ ಮಾಡಬೇಕು ಎಂದು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಹೇಳಿ ತಂದೆ ಪರ ಬ್ಯಾಟಿಂಗ್ ಮಾಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್  ಅವರನ್ನು ಕಳೆದ ಜನವರಿಯಲ್ಲಿ ಅನುದಾನದ ವಿಚಾರದ ಬಗ್ಗೆ ಭೇಟಿ ಮಾಡಿದ್ದೆ. ನಾನು ಈ ಜಿಲ್ಲೆಯ ಜನಪ್ರತಿನಿಧಿಯಾಗಿದ್ದೇನೆ. ನಾನು ಭೇಟಿಯಾಗಿದ್ದನ್ನು ನೀವೇ ಚಿತ್ರಿಕರಿಸಿದ್ದೀರಿ. ಒಂದೂವರೆ ತಿಂಗಳಿನಿಂದ ಚುನಾವಣೆ ಹಿನ್ನೆಲೆಯಲ್ಲಿ ಬ್ಯುಸಿ ಇದ್ದೆ. ಇವತ್ತಿನವರೆಗೂ ಬೆಂಗಳೂರಿಗೆ ಹೋಗಿಲ್ಲ. ಹಾಗಿದ್ದಾಗ ಡಿ.ಕೆ.ಶಿವಕುಮಾರ್ ಅವರನ್ನಾಗಲೀ, ಯಾವುದೇ ರಾಜಕಾರಣಿಯನ್ನು ಭೇಟಿ ಮಾಡುವ ಸಂದರ್ಭ ಹೇಗೆ ಬರಲಿದೆ ಎಂದು ಪ್ರಶ್ನಿಸಿದರು.

ನಮ್ಮ ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಹಿಂದೆ ಸೌಹಾರ್ದಯುತವಾಗಿ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದು ನಿಜ. ಆಗಲೂ ರೇವಣ್ಣ ಕುಟುಂಬ ಕಾಂಗ್ರೆಸ್‌ಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಸೃಷ್ಟಿ ಮಾಡಲಾಗಿತ್ತು. ಈ ಊಹಾಪೋಹಗಳನ್ನೆಲ್ಲಾ ಬಿಟ್ಟುಬಿಡಿ ಎಂದು ಮನವಿ ಮಾಡಿದರು.

ಲೋಕಸಭಾ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ನೂರಕ್ಕೆ ನೂರು ಪರ್ಸೆಂಟ್‌ ಪ್ರಜ್ವಲ್‌ ರೇವಣ್ಣ  ಜಯಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago