ಉಡುಪಿ, : ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಉಡುಪಿ ಜಿಲ್ಲೆ ಇದರ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಂಬಾಕು ಕಂಪೆನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಉದ್ದೇಶದಿಂದ, ಸರಕಾರಿ ಸಂಸ್ಥೆಗಳೊಂದಿಗೆ ಸೇರಿ ಕಾರ್ಯಕ್ರಮಗಳ ಆಯೋಜಿಸುವ ಸಾಧ್ಯತೆಯಿದ್ದು, ಇದರಿಂದ ತಂಬಾಕು ಉತ್ಪನ್ನಗಳ ಬಳಕೆಗೆ ನಾವೇ ಸಹಕಾರ ನೀಡಿದಂತಾಗುತ್ತದೆ ಆದ್ದರಿಂದ ಎಲ್ಲಾ ಇಲಾಖೆಗಳು ತಂಬಾಕು ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳೊಂದಿಗೆ ಯಾವುದೇ ರೀತಿಯಲ್ಲಿ ನೆರವು ಅಥವಾ ಸಹಕಾರ ನೀಡದಂತೆ ತಿಳಿಸಿದ ಜಿಲ್ಲಾಧಿಕಾರಿ, ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮಗಳ ಕುರಿತಂತೆ ಎಲ್ಲಾ ಕಚೇರಿಗಳಲ್ಲಿ ಸೂಕ್ತ ಫಲಕಗಳನ್ನು ಅಳವಡಿಸುವಂತೆ ಸೂಚಿಸಿ, ಈ ಫಲಕಗಳನ್ನು ಆರೋಗ್ಯ ಇಲಾಖೆ ಮೂಲಕ ಪಡೆಯುವಂತೆ ತಿಳಿಸಿದರು..
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…