Featured

ತಂಬಾಕು ಮುಕ್ತ ಅಪಾರ್ಟ್‍ಮೆಂಟ್ : ಉಡುಪಿಯಲ್ಲಿ ಪೈಲಟ್ ಯೋಜನೆ – Vishwanews24

ತಂಬಾಕು ಮುಕ್ತ ಅಪಾರ್ಟ್‍ಮೆಂಟ್ : ಉಡುಪಿಯಲ್ಲಿ ಪೈಲಟ್ ಯೋಜನೆ

ತಂಬಾಕು ಉತ್ಪನ್ನಗಳನ್ನು ಪ್ರತ್ಯಕ್ಷವಾಗಿ ಬಳಸುವ ಜನರು ಅದರ ಪ್ರಾಥಮಿಕ ಬಳಕೆದಾರರಾದರೆ ಅವರ ಸಮೀಪದವರು ಪರೋಕ್ಷವಾಗಿ ಎರಡನೇ ಬಳಕೆದಾರರಾಗಿದ್ದಾರೆ. ಪ್ರತಿ ವರ್ಷ ವಿಶ್ವದ ಪ್ರಮುಖ ನಗರಗಳಲ್ಲಿ ಸಂಭವಿಸುವ ತಡೆಯಬಹುದಾದ ಸಾವುಗಳ ಪ್ರಮಾಣದಲ್ಲಿ ಇವರಿಗೆ 2 ನೇ ಸ್ಥಾನವಾಗಿದ್ದು, ಬಳಕೆದಾರರಿಗಿಂತಲೂ ಹೆಚ್ಚಿನ ಖಾಯಿಲೆಗಳು ಇವರಲ್ಲಿ ಕಾಣಿಸಿಕೊಳ್ಳುತ್ತವೆ. ಧೂಮಪಾನದಿಂದ 10 ಲಕ್ಷ ಸಾವುಗಳು ಸಂಭವಿಸಿದರೆ ಅದರಲ್ಲಿ 2 ಲಕ್ಷ ಮಂದಿ ಎರಡನೇ ಬಳಕೆದಾರರೇ ಆಗಿರುತ್ತಾರೆ. ಭಾರತದಲ್ಲಿ ಕಂಡುಬರುವ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ. 27 ರಷ್ಟು ತಂಬಾಕು ಬಳಕೆ
ಕಾರಣವಾಗಿದೆ.

ತಂಬಾಕು ಮತ್ತು ಧೂಮಪಾನ ಉತ್ಪನ್ನಗಳ ನೇರ ಸೇವನೆಯಿಂದ ಮೃತಪಡುವವರಿಗಿಂತ ,ಇವುಗಳನ್ನು ಬಳಸುವ ಬಳಕೆದಾರರ ಕುಟುಂಬದವರು ಮತ್ತು ಸಮೀಪವರ್ತಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಾರೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ. ಇದನ್ನು ತಪ್ಪಿಸಲು ತಂಬಾಕು ಮತ್ತು ಧೂಮಪಾನ ಬಳಕೆ ವಿರುದ್ದ ಹಲವು ನಿರ್ಭಂದಗಳನ್ನು ವಿಧಿಸಿದ್ದರೂ ಸಹ ಇದರ ನಿರೀಕ್ಷಿತ ಪ್ರಮಾಣ ಕಡಿಮೆಯಾಗಿಲ್ಲ.ಈ ನಿಟ್ಟಿನಲ್ಲಿ ವಸತಿ ಸಮುಚ್ಚಯಗಳಲ್ಲಿ ತಂಬಾಕು ಉತ್ಪನ್ನ ಬಳಸುವುದನ್ನು ಸ್ವತ: ಅಲ್ಲಿನ ನಿವಾಸಿಗಳೇ ಸ್ವಯಂ ಪ್ರೇರಣೆಯಿಂದ ನಿರ್ಬಂದಿಸಿ, ತಂಬಾಕು ಮುಕ್ತ ವಸತಿ ಸಮುಚ್ಛಯವನ್ನಾಗಿ ನಿರ್ಮಿಸಬಹುದಾದ ಪ್ರಾಯೋಜಿಕ ಯೋಜನೆಯನ್ನು ಉಡುಪಿ ಜಿಲ್ಲೆಯಲ್ಲಿ ಪೈಲೆಟ್ ಆಗಿ ರಾಜ್ಯ ಸರ್ಕಾರ ಕೈಗೊಂಡಿದೆ.
ಈ ಯೋಜನೆಯಿಂದ ವಸತಿ ಸಮುಚ್ಛಯಗಳಲ್ಲಿನ ನಾಗರೀಕರಿಗೆ ಧೂಮಪಾನ ರಹಿತ ಶುದ್ದಗಾಳಿಯ ಸೇವನೆಜೊತೆಗೆ ತಂಬಾಕು ಉತ್ಪನ್ನಗಳ ಎರಡನೇ ಬಳಕೆದಾರರುಗಳನ್ನಾಗುವುದನ್ನು ತಪ್ಪಿಸಬಹುದಾಗಿದ್ದು, ಅವರಿಗೆ ಆರೋಗ್ಯವಂತ ಜೀವನ ನಡೆಸಲು ಅನುವು ಮಾಡಿಕೊಡಲು ತಂಬಾಕು ಮುಕ್ತ ವಸತಿ ಸಮುಚ್ಚಯದ ನಿರ್ಮಾಣವಾಗಲಿದೆ.

ವೈರಲ್‌ ಫೋಸ್ಟ್‌ ಯಡವಟ್ಟು : ರೀಲ್ಸ್ ಮಾಡಲು ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದ ಹುಡುಗಿಯನ್ನು ಉಪ್ಪು ಸುರಿದು ಬದುಕಿಸಲು ಯತ್ನ – Vishwanews24

ಯೋಜನೆಯ ಪ್ರಕಾರ, ತಂಬಾಕು ಮುಕ್ತ ವಸತಿ ಸಮುಚ್ಛಯಗನ್ನು ನಿರ್ಮಿಸಲು ಈಗಾಗಲೇ ಸಮುಚ್ಛಯದಲ್ಲಿ ಇರುವ ನಿವಾಸಿಗಳ ಸರ್ವೇ ನೆಡಸಿ, ಅವರಲ್ಲಿ ದೂಮಪಾನ ಮತ್ತು ತಂಬಾಕು ಬಳಸುವವರ ಮತ್ತು ಬಳಸದೇ ಇರುವವರ ಪಟ್ಟಿ ಮಾಡಿ, ಅವರಿಗೆ ತಮ್ಮ ಮನೆಗಳಲ್ಲಿ ಧೂಮಪಾನ ಮುಕ್ತಗೊಳಿಸುವ ಕುರಿತು ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತದೆ. ಉಡುಪಿ- ಮಣಿಪಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಬಂದ ಕುಟುಂಬಗಳು, ವಿದ್ಯಾರ್ಥಿಗಳು, ನೌಕರರು ವಾಸ ಮಾಡುತ್ತಿದ್ದು, ಇಲ್ಲಿ ವಸತಿ ಸಮುಚ್ಛಯಗಳು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿರುವುದರ ಜೊತೆಗೆ ಅವುಗಳಿಗೆ ಬೇಡಿಕೆಯಿದೆ. ಆದರೆ ಇಲ್ಲಿಯವರೆಗೆ ಇಲ್ಲಿನ ಯಾವುದೇ ಸಮುಚ್ಛಯಗಳಲ್ಲಿ ತಂಬಾಕು ಮತ್ತು ಧೂಮಪಾನ ಮುಕ್ತಗೊಳಿಸುವಂತಹ ಚಟುವಟಿಕೆಗಳು
ನಡೆದಿರುವ ಬಗ್ಗೆ ಕಂಡುಬಂದಿಲ್ಲ. ಆದ್ದರಿಂದ ಇಲ್ಲಿನ ವಸತಿ ಸಮುಚ್ಛಯಗಳನ್ನು ತಂಬಾಕು ಮುಕ್ತ ಸಮುಚ್ಛಯಗಳನ್ನಾಗಿ ಮಾರ್ಪಡಿಸುವದರ ಬಗ್ಗೆ ಪೈಲಟ್ ಯೋಜನೆ ರೂಪಿಸಿ , ಅದು ಯಶಸ್ವಿಯಾದಲ್ಲಿ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಉದ್ದೇಶವಿದ್ದು, ಉಡುಪಿ ಜಿಲ್ಲಾ ಸವೇಕ್ಷಣಾ ಘಟಕದಿಂದ ಜಿಲ್ಲೆಯಲ್ಲಿ ಈ ಪ್ರಾಯೋಗಿಕ ಯೋಜನೆ ಅನುಷ್ಠಾನಗೊಳ್ಳಲಿದ್ದು, ವಸತಿ ಸಮುಚ್ಛಯಗಳ ಸಮೀಕ್ಷಾ ಕಾರ್ಯ ಮತ್ತು ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ದತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ.

ಪ್ರಸ್ತುತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವಿದ್ದು, ವಸತಿ ಸಮುಚ್ಛಯಗಳನ್ನು ಧೂಮಪಾನ ಮುಕ್ತಗೊಳಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಆರೋಗ್ಯಕರ ವಾತಾವರಣ ನಿರ್ಮಿಸಲು ಸಾದ್ಯವಾಗುವುದರ ಜೊತೆಗೆ ಮುಂದಿನ ದಿನಗಳಲ್ಲಿ ವಸತಿ ಸಮುಚ್ಛಯಗಳ ನಿರ್ಮಾಣ ಸಂದರ್ಭದಲ್ಲೇ ಸಾರ್ವಜನಿಕರು ಧೂಮಪಾನ ಮುಕ್ತ ಸಮುಚ್ಛಯಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸುವ ಸಾದ್ಯತೆಗಳು ಇವೆ.

2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ..ರಿಸಲ್ಟ್‌ ನೋಡಲು ಹೀಗೆ ಮಾಡಿ – Vishwanews24

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಿದ್ದು, ಕಾರ್ಕಳದ ರೆಂಜಾಳ ಮತ್ತು ಕುಂದಾಪುರದ ಕೊರ್ಗಿ ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ಸಹ ತಂಬಾಕು ಮುಕ್ತ ಕಚೇರಿಗಳೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಂಡು ದೃಢೀಕರಣ ಪತ್ರ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ರಾಜ್ಯ ಸರ್ಕಾರ ಸೂಚಿಸಿರುವ ತಂಬಾಕು ಮುಕ್ತ ವಸತಿ ಸಮುಚ್ಛಯದ ಪೈಲಟ್ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಂಡು ಅದರಂತೆ ಕಾರ್ಯ ನಿರ್ವಹಿಸಲಾಗುವುದು .

ಡಾ.ನಾಗರತ್ನ, ಜಿಲ್ಲಾ ಸವೇಕ್ಷಣಾಧಿಕಾರಿ,ಉಡುಪಿಜಿಲ್ಲೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago