Featured

ತಡೆಗೋಡೆಗೆ ಕಾರು ಡಿಕ್ಕಿ : BRS ಶಾಸಕಿ ಲಾಸ್ಯ ನಂದಿತಾ ಸಾವು – Vishwanews24

ತಡೆಗೋಡೆಗೆ ಕಾರು ಡಿಕ್ಕಿ : BRS ಶಾಸಕಿ ಲಾಸ್ಯ ನಂದಿತಾ ಸಾವು

ಹೈದರಾಬಾದ್:‌ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ  ಶಾಸಕಿ ಜಿ ಲಾಸ್ಯ ನಂದಿತಾ  (37) ದುರ್ಮರಣಕ್ಕೀಡಾಗಿದ್ದಾರೆ.

ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್‌ನ  ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.

ನಂದಿತಾ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್‌ಪ್ರೆಸ್‌ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ನಂದಿತಾ ಅವರು ಫೆಬ್ರವರಿ 13 ರಂದು ಬಿಆರ್‌ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮರ್ರಿಗುಡ ಜಂಕ್ಷನ್‌ನಲ್ಲಿ ಇದೇ ರೀತಿಯ ರಸ್ತೆ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದರು.

ಬಿಆರ್‌ಎಸ್‌ನ ಮಾಜಿ ಶಾಸಕ ದಿವಂಗತ ಜಿ ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ ಅವರು ಕಳೆದ ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಜಿ ವೆನ್ನೆಲ ಅವರನ್ನು ಸೋಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago