ಹೈದರಾಬಾದ್: ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ (37) ದುರ್ಮರಣಕ್ಕೀಡಾಗಿದ್ದಾರೆ.
ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್‌ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.
ನಂದಿತಾ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್‌ಪ್ರೆಸ್‌ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ನಂದಿತಾ ಅವರು ಫೆಬ್ರವರಿ 13 ರಂದು ಬಿಆರ್‌ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮರ್ರಿಗುಡ ಜಂಕ್ಷನ್‌ನಲ್ಲಿ ಇದೇ ರೀತಿಯ ರಸ್ತೆ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದರು.
ಬಿಆರ್‌ಎಸ್‌ನ ಮಾಜಿ ಶಾಸಕ ದಿವಂಗತ ಜಿ ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ ಅವರು ಕಳೆದ ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಜಿ ವೆನ್ನೆಲ ಅವರನ್ನು ಸೋಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…