ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ : ಜುಲೈ 1ರಿಂದ ಹೊಸ ನಿಯಮ ಜಾರಿ – vishwanews24

Featured, ರಾಷ್ಟ್ರ ನ್ಯೂಸ್

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ -ಜುಲೈ 1ರಿಂದ ಹೊಸ ನಿಯಮ ಜಾರಿ
ನವದೆಹಲಿ : ತತ್ಕಾಲ್ ಟಿಕೆಟ್ ಬುಕ್ಕಿಂಗ್‌ನಲ್ಲಿ ಆಗುತ್ತಿರುವ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಇಲಾಖೆ ಹೊಸ ನಿಯಮ ಬರಲಿದ್ದು, ಇದೇ ಜುಲೈ 1ರಿಂದ ಜಾರಿಯಾಗಲಿದೆ.

ತತ್ಕಾಲ್ ಟಿಕೆಟ್ ಬುಕ್ಕಿಂಗ್ ಏಜೆಂಟ್‌ಗಳು ಮಾಡುವ ದುರ್ಬಳಕೆ ತಡೆಯಲು ಹಾಗೂ ಜನರು ತತ್ಕಾಲ್ ಟಿಕೆಟ್‌ನ ಲಾಭವನ್ನು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳುವ ಸಲುವಾಗಿ ಈ ಹೊಸ ನಿಯಮಗಳನ್ನು ತರಲಾಗಿದೆ ಎಂದು ರೈಲ್ವೆ ಇಲಾಖೆ ಹೊರಡಿಸಿದ ಸೂತ್ತೋಲೆಯಲ್ಲಿ ತಿಳಿಸಿದೆ.

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಮಾಡಲು ಆಧಾರ್ ಕಾರ್ಡ್ ಕಡ್ಡಾಯ ಹಾಗೂ ಜುಲೈ 15ರಿಂದ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಓಟಿಪಿ ಕಡ್ಡಾಯವಾಗಿರಲಿದೆ. ತತ್ಕಾಲ್ ಟಿಕೆಟ್ ಬುಕ್ ಮಾಡಲು ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಆಪ್‌ಗಳಲ್ಲಿ ಮಾತ್ರ ಅವಕಾಶವಿರಲಿದೆ. ಈ ನಿಯಮಗಳು ಆನ್‌ಲೈನ್ ಹಾಗೂ ಆಫ್‌ಲೈನ್ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಎರಡಕ್ಕೂ ಅನ್ವಯಿಸಲಿದೆ. ರೈಲು ಹೊರಡುವ 24 ಗಂಟೆಗಳ ಮುನ್ನವೇ ಫೈನಲ್ ಬರ್ತ್ ಚಾರ್ಟ್ ಅನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Leave a Reply