ಭೋಪಾಲ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮುಖ್ಯ ಶಿಕ್ಷಕರೊಬ್ಬರು ತನ್ನ ಸ್ವಂತ ಖರ್ಚಿನಲ್ಲಿ 19 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಾರೆ.
ಮುಖ್ಯಶಿಕ್ಷಕ ಕಿಶೋರ್ ವಿದ್ಯಾರ್ಥಿಗಳಿಗಾಗಿ ತಮ್ಮ ಉಳಿತಾಯದ ಹಣದಲ್ಲಿ 60 ಸಾವಿರ ರೂ. ಖರ್ಚು ಮಾಡಿದ್ದಾರೆ. ಜಿಲ್ಲೆಯ ಬಿಜೇಪುರ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಆರನೇ, ಏಳನೇ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳು ಮೊದಲ ಬಾರಿಗೆ ಇಂದೋರ್ ವಿಮಾನ ನಿಲ್ದಾಣಕ್ಕೆ ತಲುಪಿದಾಗ ತುಂಬಾ ಸಂತೋಷಪಟ್ಟರು. ಇಂದೋರಿನಿಂದ ದೆಹಲಿಗೆ ಎರಡು ದಿನಗಳ ಕಾಲ ಪ್ರವಾಸ ಹೋಗಿದ್ದರು.
ಇದೇ ವೇಳೆ ಮುಖ್ಯಶಿಕ್ಷಕ ಕಿಶೋರ್ ಮಾತನಾಡಿ, 19 ವಿದ್ಯಾರ್ಥಿಗಳಲ್ಲಿ ಕೆಲವರು ಇದುವರೆಗೂ ರೈಲಿನಲ್ಲಿಯೂ ಹೋಗಿರಲಿಲ್ಲ. ಇವರು ವಿಮಾನದಲ್ಲಿ ಪ್ರವಾಸ ಮಾಡಬೇಕು ಎಂದು ಇದೂವರೆಗೂ ಯೋಚನೆ ಸಹ ಮಾಡಿರಲಿಲ್ಲ. ಹಾಗಾಗಿ ನಾನು ವಿದ್ಯಾರ್ಥಿಗಳಿಗೆ ವಿಮಾನದಲ್ಲೇ ದೆಹಲಿಗೆ ಕರೆದುಕೊಂಡು ನಿರ್ಧರಿಸಿದೆ. ಟಿಕೆಟ್‍ಗಳು ಅಗ್ಗವಾಗುವುದನ್ನು ನಾನು ಗಮನಿಸುತ್ತಿದ್ದೆ. ನಂತರ ಬೆಲೆ ಕಡಿಮೆಯಾದಾಗ ಮುಂಚಿತವಾಗಿ ಟಿಕೆಟ್ ಬುಕ್ ಮಾಡಿದೆ ಎಂದರು.
ಈ ಮೊದಲು ವಿದ್ಯಾರ್ಥಿಗಳನ್ನು ರೈಲಿನಲ್ಲಿ ಆಗ್ರಾಗೆ ಕರೆದುಕೊಂಡು ಹೋಗಿದ್ದೆ. ರೈಲಿನಲ್ಲಿ ಹಿಂತಿರುಗುವಾಗ ಉತ್ಸಾಹದಲ್ಲಿದ್ದ ವಿದ್ಯಾರ್ಥಿಗಳು ನಾವು ಮುಂದಿನ ಬಾರಿ ವಿಮಾನದಲ್ಲಿ ಹೋಗೋಣ ಎಂದರು. ಮಕ್ಕಳ ಈ ಮಾತು ಕೇಳಿ ಅವರನ್ನು ವಿಮಾನದಲ್ಲೇ ಪ್ರವಾಸಕ್ಕೆ ಕರೆದುಕೊಂಡು ಹೋಗೋಣ ಎಂದು ನಿರ್ಧರಿಸಿದೆ ಎಂದು ಕಿಶೋರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಮಾಡಿದ್ದು, ಈ ವೇಳೆ ಅವರು ಕುತುಬ್ ಮಿನಾರ್, ಸಂಸತ್ ಭವನ್ ಹಾಗೂ ಕೆಂಪು ಕೋಟೆ ಸೇರಿದಂತೆ ಹಲವು ಐತಿಹಾಸಿಕ ಸ್ಥಳಗಳನ್ನು ವೀಕ್ಷಣೆ ಮಾಡಿದ್ದಾರೆ. ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಕ್ಕೆ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕನಿಗೆ ಧನ್ಯವಾದ ತಿಳಿಸಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…