ಕಾರ್ಕಳ : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ನಿನ್ನೆ ರಾತ್ರಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿರುವ ಪಕ್ಷದ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬೆಂಬಲಿಗರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ಉದಯಕುಮಾರ್ ಶೆಟ್ಟಿಯವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರಾದ ಸುಮಾರು ಮೂರು ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ತಾಲೂಕು ಕಚೇರಿ ಬಳಿಯಿರುವ ಶೆಟ್ಟಿಯವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಅಲ್ಲಿಂದ ಮೆರವಣಿಗೆಯ ಮೂಲಕ ಸಾಗಿದ ಪ್ರತಿಭಟನಾಕಾರರು ಈ ಸಲ ಕಾಂಗ್ರೆಸ್‌ನಿಂದ ಟಿಕೆಟ್ ಗಳಿಸಿರುವ ಗೋಪಾಲ ಭಂಡಾರಿಯವರ ಕಚೇರಿ ಎದುರು ಸಮಾವೇಶಗೊಂಡರು. ಮೆರವಣಿಗೆಯುದ್ದಕ್ಕೂ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯ್ಲಿವರಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಮೊಯ್ಲಿ ಪ್ರತಿಕೃತಿ ದಹಿಸಲು ಯತ್ನಿಸಿದರು. ಈ ವೇಳೆ ಮಧ್ಯೆಪ್ರವೇಶಿಸಿದ ಪೊಲೀಸರು ಅದನ್ನು ವಿಫಲಗೊಳಿಸಿದರು.
ಈ ನಡುವೆ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಮಾತನಾಡಿದ ಉದಯ ಕುಮಾರ್ ಶೆಟ್ಟಿ, ಇನ್ನೂ ಅವಕಾಶವಿದೆ. ನನಗೆ ಬಿ ಫಾರ್ಮ್ ಸಿಗುವ ವಿಶ್ವಾಸವಿದೆ. ಆದ್ದರಿಂದ ಎಲ್ಲರೂ ಶಾಂತಿಯಿಂದ ಸಹಕರಿಸುವಂತೆ ಅವರು ಕಾರ್ಯಕರ್ತರಿಗೆ ಮನವಿ ಮಾಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…