Featured

ತಪ್ಪಿದ ಟಿಕೆಟ್: ಕಾರ್ಕಳದಲ್ಲಿ ಉದಯಕುಮಾರ್ ಬೆಂಬಲಿಗರಿಂದ ಪ್ರತಿಭಟನೆ

ಕಾರ್ಕಳ : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ನಿನ್ನೆ ರಾತ್ರಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿರುವ ಪಕ್ಷದ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬೆಂಬಲಿಗರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಉದಯಕುಮಾರ್ ಶೆಟ್ಟಿಯವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರಾದ ಸುಮಾರು ಮೂರು ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ತಾಲೂಕು ಕಚೇರಿ ಬಳಿಯಿರುವ ಶೆಟ್ಟಿಯವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಅಲ್ಲಿಂದ ಮೆರವಣಿಗೆಯ ಮೂಲಕ ಸಾಗಿದ ಪ್ರತಿಭಟನಾಕಾರರು ಈ ಸಲ ಕಾಂಗ್ರೆಸ್‌ನಿಂದ ಟಿಕೆಟ್ ಗಳಿಸಿರುವ ಗೋಪಾಲ ಭಂಡಾರಿಯವರ ಕಚೇರಿ ಎದುರು ಸಮಾವೇಶಗೊಂಡರು. ಮೆರವಣಿಗೆಯುದ್ದಕ್ಕೂ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯ್ಲಿವರಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಮೊಯ್ಲಿ ಪ್ರತಿಕೃತಿ ದಹಿಸಲು ಯತ್ನಿಸಿದರು. ಈ ವೇಳೆ ಮಧ್ಯೆಪ್ರವೇಶಿಸಿದ ಪೊಲೀಸರು ಅದನ್ನು ವಿಫಲಗೊಳಿಸಿದರು.

ಈ ನಡುವೆ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಮಾತನಾಡಿದ ಉದಯ ಕುಮಾರ್ ಶೆಟ್ಟಿ, ಇನ್ನೂ ಅವಕಾಶವಿದೆ. ನನಗೆ ಬಿ ಫಾರ್ಮ್ ಸಿಗುವ ವಿಶ್ವಾಸವಿದೆ. ಆದ್ದರಿಂದ ಎಲ್ಲರೂ ಶಾಂತಿಯಿಂದ ಸಹಕರಿಸುವಂತೆ ಅವರು ಕಾರ್ಯಕರ್ತರಿಗೆ ಮನವಿ ಮಾಡಿದರು.

 

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago