Featured

ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು , ಬೆದರಿಕೆಗಳಿಗೆ ಹೆದರುವುದಿಲ್ಲ : ಉದಯನಿಧಿ – Vishwanews24

ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು , ಬೆದರಿಕೆಗಳಿಗೆ ಹೆದರುವುದಿಲ್ಲ : ಉದಯನಿಧಿ

ಚೆನ್ನೈ,: ಅಯೋಧ್ಯೆಯ ಸ್ವಾಮೀಜಿಯೊಬ್ಬರು ತಮಗೆ ಜೀವ ಬೆದರಿಕೆ ಒಡ್ಡಿರುವ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್,ತಮಿಳಿಗಾಗಿ ರೈಲು ಹಳಿ ಮೇಲೆ ತಲೆ ಇಟ್ಟ ಕಲಾವಿದನ ಮೊಮ್ಮಗ ನಾನು. ಇದು ನಮಗೆ ಹೊಸದಲ್ಲ. ಈ ಎಲ್ಲಾ ಬೆದರಿಕೆಗಳಿಗೆ ನಾವು ಹೆದರುವವರಲ್ಲ ಎಂದು ಹೇಳಿದ್ದಾರೆ.

“ಸನಾತನ ಧರ್ಮ” ಕುರಿತು ಉದಯನಿಧಿ ನೀಡಿರುವ ಹೇಳಿಕೆಗೆ ಹಲವು ಹಿಂದೂ ಸ್ವಾಮೀಜಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ತಪಸ್ವಿ ಧವನಿ ದೇವಸ್ಥಾನದ ಪ್ರಧಾನ ಅರ್ಚಕ ಪರಮಹಂಸ ಆಚಾರ್ಯ ಜೀವ ಬೆದರಿಕೆ ಹಾಕಿದ್ದಾರೆ.

ಉದಯನಿಧಿ ತಲೆ ಕಡಿದು ತಂದುಕೊಟ್ಟವರಿಗೆ 10 ಕೋಟಿ ರೂ ಬಹುಮಾನವನ್ನು ನೀಡುತ್ತೇನೆ. ಯಾರೂ ಉದಯನಿಧಿನನ್ನು ಕೊಲ್ಲುವ ಧೈರ್ಯ ಮಾಡದಿದ್ದರೆ ನಾನೇ ಆತನನ್ನು ಪತ್ತೆ ಮಾಡಿ ಹತ್ಯೆ ಮಾಡುತ್ತೇನೆ ಎಂದು ಹೇಳಿದ್ದರು.

ಈ ಕುರಿತು ಕಾರ್ಯಕ್ರಮೊಂದರಲ್ಲಿ ಮಾತನಾಡಿದ ಉದಯನಿಧಿ, ಸ್ವಾಮೀಜಿ ಈ ಹಿಂದೆಯೂ ಕೂಡ ವಿವಾದಿತ ಹೇಳಿಕೆ ನೀಡಿದ್ದು,’ ಪಠಾಣ್’ ಚಿತ್ರಕ್ಕೆ ಸಂಬಂಧಿಸಿದಂತೆ ನಟ ಶಾರುಕ್ ಖಾನ್ ಅವರನ್ನು ಜೀವಂತ ಸುಡುತ್ತೇನೆ ಎಂದಿದ್ದರು.

ಪರಮಹಂಸ ಆಚಾರ್ಯ ಸನಾತನ (ಧರ್ಮ) ಬಗ್ಗೆ ಮಾತನಾಡಿದ್ದಕ್ಕಾಗಿ ನನ್ನ ತಲೆ ಬೋಳಿಸಲು 10 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ನನ್ನ ತಲೆಯನ್ನು ಬಾಚಲು 10 ರೂಪಾಯಿ ಬಾಚಣಿಗೆ ಸಾಕು” ಎಂದು ಅವರು ಬೆದರಿಕೆಯನ್ನು ಲಘುವಾಗಿ ಪರಿಗಣಿಸಿದ್ದಾರೆ.

ಈ ರೀತಿಯ ಬೆದರಿಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು ಎಂದು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯ ನಿಧಿ ಹೇಳಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

8 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

8 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago