ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಬಿಜೆಪಿಯ ಅಬ್ಬರ ಜೋರಾಗಿದ್ದು ಅದರ ಪರಿಣಾಮವಾಗಿ 15 ಮಾಜಿ ಶಾಸಕರು ಮತ್ತು ಓರ್ವ ಮಾಜಿ ಸಂಸದ ಇಂದು ಬಿಜೆಪಿ ಸೇರಿದರು.
ಇಂದು ದೆಹಲಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಸಮ್ಮುಖದಲ್ಲಿ ಎಲ್ಲಾ ನಾಯಕರು ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಶಾಸಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಪಕ್ಷದ ಶಾಲು ಹಾಕಿ ನಾಯಕರನ್ನು ಸ್ವಾಗತಿಸಿದರು. ಇದರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ 370 ಮತ್ತು ಎನ್‌ಡಿಎ 400 ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಯಕರನ್ನು ಸ್ವಾಗತಿಸಿದ ಅಣ್ಣಾಮಲೈ ಅವರು ಬಿಜೆಪಿಗೆ ಸೇರಿದ ಮಾಜಿ ನಾಯಕರು ಅನುಭವದ ಸಂಪತ್ತನ್ನೇ ಹೊತ್ತು ತಂದಿದ್ದಾರೆ ಜೊತೆಗೆ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಲು ಬಯಸುತ್ತಾರೆ ಎಂದು ಹೇಳಿದರು.
ಪಕ್ಷ ಸೇರಿದವರ ವಿವರ:
ಬಿಜೆಪಿ ಸೇರ್ಪಡೆಯಾದವರ ಪಟ್ಟಿ ಬಹಿರಂಗವಾಗಿದೆ.ಎಡಿಎಂಕೆ ಮಾಜಿ ಶಾಸಕ ಕೆ.ವಡಿವೇಲ್, ಚಾಲೆಂಜರ್ ದುರಾಸಾಮಿ, ಪಿ.ಎಸ್.ಕಂದಸಾಮಿ, ಆರ್.ಚಿನ್ನಸಾಮಿ, ಮಾಜಿ ಸಚಿವ ಗೋಮತಿ ಶ್ರೀವಾಸನ್, ವಿ.ಆರ್.ಜಯರಾಮನ್, ಎಸ್.ಎಂ.ವಾಸನ್, ಪಿ.ಎಸ್.ಅರುಳ್, ಎಸ್.ಗುರುನಾಥನ್, ಆರ್.ರಾಜೇಂದ್ರನ್, ಸೆಲ್ವಿ. ಮುರುಗೇಶನ್., ಎ ರೋಕಿಣಿ, ಕೆ ತಮಿಳಗನ್, ಎಸ್‌ಇ ವೆಂಕಟಾಚಲಂ, ಮುತ್ತು ಕೃಷ್ಣನ್ ಮತ್ತು ಡಿಎಂಕೆ ಮಾಜಿ ಸಂಸದ ವಿ ಕುಲಂದೈವೇಲು.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ ಮಾಜಿ ಶಾಸಕರು ಮತ್ತು ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸೇರಿರುವುದು ದಕ್ಷಿಣದಲ್ಲಿ ಪಕ್ಷದ ಹೆಚ್ಚುತ್ತಿರುವ ವಿಶ್ವಾಸಾರ್ಹತೆಯನ್ನು ತೋರಿಸುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜೀವ್ ಚಂದಶೇಖರ್ ಸಂತಸ ವ್ಯಕ್ತಪಡಿಸಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಎಲ್ಲ ಮುಖಂಡರಿಗೆ ಭವ್ಯ ಸ್ವಾಗತ ಕೋರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…