Featured

ತಮಿಳುನಾಡಿನಿಂದ ಬಂದು ಬಾಂಬ್‌ ಇಡುತ್ತಾರೆ : ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಶೋಭಾ ಕರಂದ್ಲಾಜೆ – Vishwanews24

ತಮಿಳುನಾಡಿನಿಂದ ಬಂದು ಬಾಂಬ್‌ ಇಡುತ್ತಾರೆ : ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಶೋಭಾ ಕರಂದ್ಲಾಜೆ

ಬೆಂಗಳೂರು: “ತಮಿಳುನಾಡಿ ನಲ್ಲಿ ಟ್ರೈನಿಂಗ್‌ ಪಡೆದು ಬೆಂಗಳೂರಿಗೆ ಬಂದು ಬಾಂಬ್‌ ಇಡುತ್ತಾರೆ’ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯು ಸೋಷಿ ಯಲ್‌ ಮೀಡಿಯಾದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಪ್ರತಿಪಕ್ಷ ನಾಯಕ ಪಳನಿಸ್ವಾಮಿ ಅವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.

ಹನುಮಾನ ಚಾಲೀಸಾ ಪ್ರಕರಣ ಸಂಬಂಧ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿ, ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾಗ ಶೋಭಾ ಅವರು, ರಾಮೇಶ್ವರ ಕೆಫೆ ಬಾಂಬ್‌ ಸ್ಫೋಟ ಉಲ್ಲೇಖೀಸಿ, ತಮಿಳುನಾಡು ವಿರುದ್ಧ ಆರೋಪ ಮಾಡಿದ್ದರು. ಈ ಹೇಳಿಕೆಯು ಆಕ್ರೋಶಕ್ಕೆ ಕಾರಣವಾಗುತ್ತಿ ದ್ದಂತೆ ಶೋಭಾ ಅವರು, “ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಕೋರುತ್ತೇನೆ’ ಮತ್ತೆ ಟ್ವೀಟ್‌ ಮಾಡಿದ್ದಾರೆ.

ತ.ನಾಡು ಸಿಎಂ ಹೇಳಿದ್ದೇನು?: “ಶೋಭಾ ಅವರ ಬೇಜವಾ ಬ್ದಾರಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಿಜೆಪಿಯ ಈ ವಿಭಜನಕಾರಿ ಮಾತುಗಳನ್ನು ಕನ್ನಡಿಗರು ಮತ್ತು ತಮಿಳರು ಸಂಪೂರ್ಣವಾಗಿ ತಿರಸ್ಕರಿಸಲಿ ದ್ದಾರೆ. ಶಾಂತಿ, ಸೌಹಾರ್ದ ಮತ್ತು ರಾಷ್ಟ್ರೀಯ ಐಕ್ಯತೆಗೆ ಭಂಗ ಉಂಟು ಮಾಡುತ್ತಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿ ಸುತ್ತೇನೆ. ಚುನಾವಣಾ ಆಯೋಗವು ಈ ದ್ವೇಷ ಭಾಷಣದ ಬಗ್ಗೆ ಕೂಡಲೇ ಗಮನ ಹರಿಸಿ, ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಟ್ವೀಟ್‌ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago