ಬೆಂಗಳೂರು: “ತಮಿಳುನಾಡಿ ನಲ್ಲಿ ಟ್ರೈನಿಂಗ್ ಪಡೆದು ಬೆಂಗಳೂರಿಗೆ ಬಂದು ಬಾಂಬ್ ಇಡುತ್ತಾರೆ’ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯು ಸೋಷಿ ಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪ್ರತಿಪಕ್ಷ ನಾಯಕ ಪಳನಿಸ್ವಾಮಿ ಅವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ಹನುಮಾನ ಚಾಲೀಸಾ ಪ್ರಕರಣ ಸಂಬಂಧ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿ, ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾಗ ಶೋಭಾ ಅವರು, ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಉಲ್ಲೇಖೀಸಿ, ತಮಿಳುನಾಡು ವಿರುದ್ಧ ಆರೋಪ ಮಾಡಿದ್ದರು. ಈ ಹೇಳಿಕೆಯು ಆಕ್ರೋಶಕ್ಕೆ ಕಾರಣವಾಗುತ್ತಿ ದ್ದಂತೆ ಶೋಭಾ ಅವರು, “ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಕೋರುತ್ತೇನೆ’ ಮತ್ತೆ ಟ್ವೀಟ್ ಮಾಡಿದ್ದಾರೆ.
ತ.ನಾಡು ಸಿಎಂ ಹೇಳಿದ್ದೇನು?: “ಶೋಭಾ ಅವರ ಬೇಜವಾ ಬ್ದಾರಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಿಜೆಪಿಯ ಈ ವಿಭಜನಕಾರಿ ಮಾತುಗಳನ್ನು ಕನ್ನಡಿಗರು ಮತ್ತು ತಮಿಳರು ಸಂಪೂರ್ಣವಾಗಿ ತಿರಸ್ಕರಿಸಲಿ ದ್ದಾರೆ. ಶಾಂತಿ, ಸೌಹಾರ್ದ ಮತ್ತು ರಾಷ್ಟ್ರೀಯ ಐಕ್ಯತೆಗೆ ಭಂಗ ಉಂಟು ಮಾಡುತ್ತಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿ ಸುತ್ತೇನೆ. ಚುನಾವಣಾ ಆಯೋಗವು ಈ ದ್ವೇಷ ಭಾಷಣದ ಬಗ್ಗೆ ಕೂಡಲೇ ಗಮನ ಹರಿಸಿ, ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…