Featured

ತಮಿಳುನಾಡಿನ ದೇವಸ್ಥಾನಗಳ ಒಳಭಾಗದಲ್ಲಿ ಮೊಬೈಲ್ ಫೋನ್  ಬಳಸುವಂತಿಲ್ಲ : ಮದ್ರಾಸ್ ಹೈಕೋರ್ಟ್ ಆದೇಶ – Vishwanews24

ತಮಿಳುನಾಡು : ದೇವಾಲಯಗಳಲ್ಲಿ ಮೊಬೈಲ್ ಬಳಸುವಂತಿಲ್ಲ : ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನಾದ್ಯಂತ  ದೇವಸ್ಥಾನಗಳ  ಒಳಭಾಗದಲ್ಲಿ ಮೊಬೈಲ್ ಫೋನ್  ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ದೇವಾಲಯಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ಸಲುವಾಗಿ ಮೊಬೈಲ್ ಫೋನ್ ನಿಷೇಧಿಸಲು ಮುಂದಾಗಿದ್ದೇವೆ ಎಂದು ಕೋರ್ಟ್ ತಿಳಿಸಿದೆ.

ಇದನ್ನೂ ಓದಿ:  

ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ನಿಷೇಧಿಸುವ ಮಹತ್ವದ ಆದೇಶ ನೀಡಿದೆ. ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿದರು.

ಭಕ್ತಾಧಿಗಳಿಗೆ ಮೊಬೈಲ್ ಫೋನ್ ಬಳಕೆಯಿಂದಾಗಿ ಹಲವು ತೊಂದರೆಗಳು ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್‍ಗಳನ್ನು ಸಮರ್ಪಕವಾಗಿ ಹೊರಗಿಟ್ಟು ಬರಲು ಭದ್ರತಾ ಲಾಕರ್ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.

ಇದನ್ನೂ ಓದಿ: 

ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್‌ಗಳನ್ನು ಅಳವಡಿಸಬೇಕು. ಈ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ದೇವಾಲಯಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದು ಆದೇಶಿಸಿದೆ.

ಈಗಾಗಲೇ ಕೇರಳದ ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನ, ತಮಿಳುನಾಡಿನ ಮಧುರೈ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಮತ್ತು ಆಂಧ್ರಪ್ರದೇಶದ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಪ್ರಸಿದ್ಧ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧವನ್ನು ಜಾರಿಗೊಳಿಸಲಾಗಿದೆ. ಇದಲ್ಲದೇ ಮೊಬೈಲ್ ಡೆಪಾಸಿಟ್ ಮಾಡಲು ಭದ್ರತಾ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಅಳವಡಿಸಿಕೊಳ್ಳಿ. ದೇವಸ್ಥಾನದ ಆವರಣವನ್ನು ಪ್ರವೇಶಿಸುವ ಮೊದಲು ಫೋನ್‍ಗಳನ್ನು ಡೆಪಾಸಿಟ್ ಮಾಡುವಂತಹ ವ್ಯವಸ್ಥೆ ಮಾಡಿ ಎಂದು ಕೋರ್ಟ್ ತಿಳಿಸಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

15 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

16 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

16 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

16 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

17 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

17 hours ago