Featured

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

ಚೆನ್ನೈ: ಸಿಎಂ ಸಿ. ಜೋಸೆಫ್‌ ವಿಜಯ್‌ ತಮಿಳುನಾಡಿನ ರೈತರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಇದರೊಂದಿಗೆ 75,000 ರೂ.ಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ 35,000 ರೂ. ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಪರಿಷ್ಕೃತ ಯೋಜನೆಯ ಪ್ರಕಾರ, 2025 ರ ಮೇ 1 ರಿಂದ 2026 ರ ಫೆ.28 ರ ನಡುವೆ ಸಹಕಾರಿ ಬ್ಯಾಂಕುಗಳಿಂದ 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಆಗಲಿದೆ. ರಾಜ್ಯಾದ್ಯಂತ ಸುಮಾರು 14.43 ಲಕ್ಷಕ್ಕೂ ಹೆಚ್ಚು ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ. ಆದ್ರೆ ಈ ಕ್ರಮದಿಂದ ಸರ್ಕಾರಕ್ಕೆ 5,932.23 ಕೋಟಿ ರೂ. ಹೊರೆಯಾಗಲಿದೆ. ಇದನ್ನೂ ಓದಿ: ಪ್ರಸಾದದ ಗುಣಮಟ್ಟ ಸುಧಾರಿಸಲು ಮೈಸೂರಿನ ಸಂಸ್ಥೆ ಜೊತೆ ಟಿಟಿಡಿ ಒಪ್ಪಂದ

ಯಾರಿಗೆ ಪ್ರಯೋಜನ?
* 8.33 ಲಕ್ಷ ಸಣ್ಣ ರೈತರು
*5.16 ಲಕ್ಷ ಮಧ್ಯಮ ರೈತರು
* 93,548 ಬೃಹತ್‌ ರೈತರಿಗೆ ಪ್ರಯೋಜನ

ಒಟ್ಟು ಫಲಾನುಭವಿಗಳಲ್ಲಿ 75,000 ರೂ.ವರೆಗಿನ ಸಾಲ ಹೊಂದಿರುವ 6.22 ಲಕ್ಷಕ್ಕೂ ಹೆಚ್ಚು ರೈತರು ಸಂಪೂರ್ಣ ಮನ್ನಾ ಪ್ರಯೋಜನ ಪಡೆಯುತ್ತಾರೆ. ಅದಕ್ಕಿಂತಲೂ ಹೆಚ್ಚಿನ ಸಾಲ ಹೊಂದಿದವರಲ್ಲಿ 8.21 ಲಕ್ಷ ರೈತರ ಸಾಲ ತಲಾ 35,000 ರೂ. ಮನ್ನಾ ಆಗಲಿದೆ. ಇದು ಸಿಎಂ ವಿಜಯ್‌ ಸರ್ಕಾರ ಇದುವೆರೆಗೆ ಘೋಷಿಸಿದ ಅತಿದೊಡ್ಡ ರೈತ ಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ.

 

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

2 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

3 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

3 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

7 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

7 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

8 hours ago