Featured

ತಮಿಳುನಾಡಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಇಬ್ಬರು ಶಿಕ್ಷಕಿಯರ ಬಂಧನ  – Vishwanews24

ತಮಿಳುನಾಡಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಇಬ್ಬರು ಶಿಕ್ಷಕಿಯರ ಬಂಧನ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಸೇರಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲಕುರಿಚಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬಳು ತನ್ನ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದಕ್ಕೆ ಶಿಕ್ಷಕರ ಚಿತ್ರಹಿಂಸೆಯೇ ಕಾರಣ ಎಂದು ಆರೋಪಿಸಿದ ಡೆತ್‌ನೋಟ್ ಪತ್ತೆಯಾಗಿತ್ತು. ಮರೋಣತ್ತರ ಪರೀಕ್ಷೆಯಲ್ಲೂ ಹಲವು ಗಾಯದ ಗುರುತುಗಳು, ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು ಎಂದು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಲೆಯ ರಸಾಯನಶಾಸ್ತ್ರ ಶಿಕ್ಷಕಿ ಹರಿಪ್ರಿಯಾ ಹಾಗೂ ಗಣಿತ ಶಿಕ್ಷಕಿ ಕೃತಿಕಾ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಶಾಲಾ ಪ್ರಾಂಶುಪಾಲರು, ಕಾರ್ಯದರ್ಶಿ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಏನು?
ಚಿನ್ನ ಸೇಲಂ ಸಮೀಪದ ಕಣಿಯಮೂರ್‌ನಲ್ಲಿರುವ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಬುಧವಾರ, 12ನೇ ತರಗತಿ ಶವವಾಗಿ ಪತ್ತೆಯಾಗಿದ್ದಳು. ಶಾಲೆಯ ಆಡಳಿತಾಧಿಕಾರಿಗಳು ಸಾವಿನ ಕುರಿತು ಮಾಹಿತಿ ನೀಡಿದ ಬಳಿಕ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಲ್ಲಕುರಿಚಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದರು. ಶಾಲೆಯ ಶಿಕ್ಷಕರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಉಲ್ಲೇಖಿಸಿರುವ ಸೂಸೈಡ್ ನೋಟ್ ಸಹ ಪತ್ತೆಯಾಗಿತ್ತು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

15 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

16 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

16 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

16 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

16 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago