ತಮಿಳುನಾಡು ಜಲ್ಲಿಕಟ್ಟು ಕ್ರೀಡೆ : ಓರ್ವ ಸಾವು, 30 ಜನರ ಸ್ಥಿತಿ ಗಂಭೀರ -Vishwanews24
ಚೆನ್ನೈ: ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ.
ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನಲ್ಲಿ ನಡೆದ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 30 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಅವನಿಪುರಂನ ಸೈಂಟ್ ಅಂಥೋನಿ ಚರ್ಚ್ ಫೆಸ್ಟಿವಲ್ ಸಹಯೋಗದೊಂದಿಗೆ ಈ ಜಲ್ಲಿಕಟ್ಟು ಕ್ರೀಡೆ ಆಯೋಜಿಸಲಾಗಿತ್ತು. ಸಚಿವ ಜೆ. ಭಾಸ್ಕರನ್ ಮತ್ತು ಜಿಲ್ಲಾಧಿಕಾರಿ ಜಯಕಾಂತನ್ ಪಾಲ್ಗೊಂಡಿದ್ದರು.

ಒಟ್ಟು 600ಕ್ಕೂ ಹೆಚ್ಚು ಹೋರಿಗಳು ಕೂಟದಲ್ಲಿ ಭಾಗವಹಿದ್ದವು. ತಮಿಳು ನಾಡಿನ ನಾನಾ ಭಾಗಗಳಿಂದ ಉತ್ಸಾಹಿ ಯುವಕರು ಆಗಮಿಸಿ ಕ್ರೀಡೆಯಲ್ಲಿ ಭಾಗವಹಿಸಿದ್ದರು.
ಈ ಬಾರಿಯ ಪೊಂಗಲ್ ಗೆ ತಮಿಳುನಾಡಿನ ಮೂರು ಕಡೆ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸಲಾಗಿತ್ತು. ಮಧುರೈ ಸಮೀಪದ ಅವನಿಪುರಂ, ಪಲಮೇಡು ಮತ್ತು ಅಲಂಕನಲ್ಲೂರಿನಲ್ಲಿ ಜಲ್ಲಿಕಟ್ಟು ನಡೆದಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
