Featured

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ – vishwanews24

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ

ಚೆನ್ನೈ: ಬಹುಭಾಷಾ ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಖುಷ್ಬೂ ಸುಂದರ್, “ನನಗೆ ನಿಜಕ್ಕೂ ತುಂಬಾ ಸಂತೋಷವಾಗಿದೆ” ಎಂದು ತಮ್ಮ ನೇಮಕ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ತನ್ನ ಮೇಲೆ ನಂಬಿಕೆ ಇರಿಸಿ, ಈ ಹುದ್ದೆ ನೀಡಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

“ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ, ವಿಶೇಷವಾಗಿ ನಾಲ್ವರು ಉಪಾಧ್ಯಕ್ಷರ ಮೇಲ್ವಿಚಾರಣೆಯಲ್ಲಿರುವ ದಕ್ಷಿಣ ಚೆನ್ನೈ ಅನ್ನು ಗುರಿಯಾಗಿಸಿಕೊಂಡು ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಹಂತದಲ್ಲಿ ಪಕ್ಷದ ಉಪಸ್ಥಿತಿಯನ್ನು ಬಲಿಷ್ಠಗೊಳಿಸುವುದು ನನ್ನ ತಕ್ಷಣದ ಆದ್ಯತೆಯಾಗಿದೆ. ನಮಗೆಷ್ಟು ಸಾಧ್ಯವೊ ಅಷ್ಟು ಜನರನ್ನು, ಸಾರ್ವಜನಿಕರನ್ನು ಹಾಗೂ ಮತದಾರರನ್ನು ತಲುಪಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಒಳಿತಿನ ಕುರಿತು ಮನವರಿಕೆ ಮಾಡಲು ಮತದಾರರನ್ನು ನೇರವಾಗಿ ಭೇಟಿ ಮಾಡಲು ಬಹುಶಃ ಮನೆ ಮನೆ ಅಭಿಯಾನ ನಡೆಸಬೇಕಾಗಿದೆ. ಪ್ರಧಾನಿ ಹಾಗೂ ಬಿಜೆಪಿ ದೇಶಕ್ಕೆ ಎಷ್ಟು ಒಳಿತನ್ನು ಮಾಡಿದೆ ಹಾಗೂ ಅವರಿಂದ ತಮಿಳುನಾಡಿನ ಮತದಾರರ ಜೀವನ ಶೈಲಿ ಹೇಗೆ ಸುಧಾರಿಸಲಿದೆ ಎಂಬುದರ ಕುರಿತು ಅರಿವು ಮೂಡಿಸಬೇಕಿದೆ” ಎಂದು ಅವರು ತಮ್ಮ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡಿದ್ದಾರೆ.

ಎಐಎಡಿಎಂಕೆಯೊಂದಿಗಿನ ಮೈತ್ರಿ ಕುರಿತೂ ತಮ್ಮ ಅನಿಸಿಕೆ ಹಂಚಿಕೊಂಡಿರುವ ಖುಷ್ಬೂ ಸುಂದರ್, “ಎರಡೂ ಪಕ್ಷಗಳ ನಡುವೆ ಮೊದಲಿನಿಂದಲೂ ಸೌಹಾರ್ದ ಸಂಬಂಧವಿದೆ. ಚುನಾವಣೆಗಳಲ್ಲಿ ಹೋರಾಡಲು ನಮಗೆ ಎಐಎಡಿಎಂಕೆಯಂತಹ ಮೈತ್ರಿ ಪಕ್ಷ ಇದೆ ಎಂಬುದು ಸಂತಸದ ವಿಚಾರವಾಗಿದೆ. ಉಳಿದ ವಿಚಾರಗಳ ಕುರಿತು ಪಕ್ಷದ ಮುಖಂಡರು ಹಾಗೂ ಹಿರಿಯ ನಾಯಕರು ಮಾತುಕತೆ ನಡೆಸಿ, ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago