ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಈ ಕುರಿತು ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ತಿಳಿಸಿದ್ದಾರೆ.
ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ನೀಡಲ್ಲ ಎಂದಿದ್ದಾರೆ.
ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಪ್ರತಿ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದ್ರೆ ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…