ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾನುವಾರ ತಮಿಳುನಾಡಿನ 38 ಜಿಲ್ಲೆಗಳ ಪೈಕಿ 36 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಷ್ಟೇ ಅಲ್ಲ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ವರದಿ ತಿಳಿಸಿದೆ.ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಪರಿಣಾಮ ಸೋಮವಾರ(ನವೆಂಬರ್ 08) ಬಹುತೇಕ ಸರ್ಕಾರಿ ಕಚೇರಿಗಳು ಬಂದ್ ಆಗಿದ್ದು, ಖಾಸಗಿ ಕಚೇರಿಯ ಉದ್ಯೋಗಿಗಳಿಗೆ ರಜೆ ನೀಡಿ ಅಥವಾ ವರ್ಕ್ ಫ್ರಂ ಹೋಮ್ ಕೊಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.
ರಾಜಧಾನಿ ಚೆನ್ನೈನಲ್ಲಿ 24 ಗಂಟೆಗಳಲ್ಲಿ 134.29 ಮಿಮೀ ರಷ್ಟು ಅತೀ ಹೆಚ್ಚು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದ ಹಲವಾರು ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ಮನೆಗಳು ನೀರಿನಲ್ಲಿ ಮುಳುಗಡೆಗೊಂಡಿದೆ. ಅಲ್ಲದೇ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಮೂರು ಜಲಾಶಯಗಳ ಗೇಟ್‍ಗಳನ್ನು ತೆರೆಯಲಾಗಿದೆ.
ಭಾನುವಾರ ಬೆಳಗ್ಗೆವರೆಗೆ ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಬರೋಬ್ಬರಿ 21 ಸೆಂಟಿ ಮೀಟರ್ ಮಳೆ ಸುರಿದಿರುವುದಾಗಿ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಕರೆ ಮಾಡಿ ರಾಜ್ಯದ ಪರಿಸ್ಥಿತಿ ಸಂವಹನ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕುರಿತಂತೆ ಕೇಂದ್ರದಿಂದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಲ್ಲಿಯವರೆಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ನಾಲ್ಕು ತಂಡಗಳನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿತ್ತು. ಅಲ್ಲದೇ ಮಂಗಳವಾರ ಮತ್ತು ಬುಧವಾರ ಕೂಡಾ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…