ತಮಿಳುನಾಡು: ಮನೆಯಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚೆಂಗಲ್‌ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು. ಗುಡುವಂಚೇರಿಯಲ್ಲಿರುವ ಆರ್‌ಆರ್ ಬೃಂದಾವನ ಅಪಾರ್ಟ್‌ಮೆಂಟ್‌ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬಿಕರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್‌ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ದ ಕೇಳಿ ಅಕ್ಕಪಕ್ಕದ ಅಪಾರ್ಟ್‌ಮೆಂಟ್‌ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…