Featured

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್’ ವಿಜಯಕಾಂತ್ ಇನ್ನಿಲ್ಲ – vishwanews24

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್’ ವಿಜಯಕಾಂತ್ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ, ಖಾಸಗಿ ಆಸ್ಪತ್ರೆಯಲ್ಲಿ  ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡಿದ್ದವು. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ತಮಿಳು ನಾಡಿನ ಡಿಎಂಡಿಕೆ ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್  ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ ಲೋಕಕ್ಕೆ ಹೋಗಿದ್ಧಾರೆ ಕ್ಯಾಪ್ಟನ್ ವಿಜಯಕಾಂತ್.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

16 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

17 hours ago